ADVERTISEMENT

ಕೊಪ್ಪಳ: ಚುನಾವಣಾ ಹೊಸ್ತಿಲಲ್ಲಿ ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟ

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2024, 13:23 IST
Last Updated 25 ಫೆಬ್ರುವರಿ 2024, 13:23 IST
<div class="paragraphs"><p>ಮಾಜಿ ಸಚಿವ ಇಕ್ಬಾಲ್‌ ಅನ್ಸಾರಿ</p></div>

ಮಾಜಿ ಸಚಿವ ಇಕ್ಬಾಲ್‌ ಅನ್ಸಾರಿ

   

ಕೊಪ್ಪಳ: ಲೋಕಸಭಾ ಚುನಾವಣೆಗೆ ಕೆಲ ದಿನಗಳಷ್ಟೇ ಬಾಕಿಯಿರುವ ಹೊತ್ತಿನಲ್ಲಿ ಜಿಲ್ಲೆಯ ಗಂಗಾವತಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟಗೊಂಡಿದೆ.

ಸ್ವ ಪಕ್ಷದ ನಾಯಕರ ವಿರುದ್ಧ ಇಷ್ಟು ದಿನ ಪರೋಕ್ಷ ವಾಗ್ದಾಳಿ ನಡೆಸುತ್ತಿದ್ದ ಮಾಜಿ ಸಚಿವ ಇಕ್ಬಾಲ್‌ ಅನ್ಸಾರಿ ಈಗ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆಡಿಯೊ ಬಿಡುಗಡೆ ಮಾಡಿರುವ ಅವರು ‘2023ರ ವಿಧಾನಸಭಾ ಚುನಾವಣೆಯಲ್ಲಿ ಗಂಗಾವತಿ ಕ್ಷೇತ್ರದಿಂದ ನಾನು ಸೋಲಲು ನಮ್ಮ ಪಕ್ಷದವರೇ ಕಾರಣ’ ಎಂದು ಆರೋಪಿಸಿದ್ದಾರೆ.

ADVERTISEMENT

‘ಕಾಂಗ್ರೆಸ್‌ನಲ್ಲಿದ್ದುಕೊಂಡೇ ನನ್ನ ವಿರುದ್ಧ ಕೆಲಸ ಮಾಡಿದವರ ಕುತಂತ್ರದಿಂದಾಗಿ ಸೋಲಾಗಿದೆ. ಇದನ್ನು ಇಲ್ಲಿಗೆ ಬಿಡುವುದಿಲ್ಲ. ಮುಸ್ಲಿಂ ಸಮಾಜದ ವ್ಯಕ್ತಿ ಗೆಲ್ಲಬಾರದು ಎಂದು ಪಕ್ಷದ ಬ್ಲ್ಯಾಕ್ ಘಟಕದ ಅಧ್ಯಕ್ಷ, ಗಂಗಾವತಿ ಹಾಗೂ ಕೊಪ್ಪಳದ ಮುಖಂಡರು ಸೇರಿಯೇ ಸೋಲಿನ ಬಲೆ ಹೆಣೆದಿದ್ದಾರೆ. ಮುಂಬರುವ ಚುನಾವಣೆಗೆ ಅವರಿಗೆಲ್ಲ ತಕ್ಕ ಪಾಠ ಕಲಿಸುತ್ತೇನೆ. ಮುಸ್ಲಿಂ ಸಮುದಾಯದವರ ಮನೆಮನೆಗೆ ಹೋಗಿ ಸೋಲಿಸಿದವರ ಕಥೆ ಹೇಳುತ್ತೇನೆ’ ಎಂದಿದ್ದಾರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.