
ಕೊಪ್ಪಳ: ಕಾರಾಗೃಹ ಮತ್ತು ಸುಧಾರಣಾ ಸೇವೆ ಇಲಾಖೆ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಕುಮಾರ್ ಅವರ ಸೂಚನೆ ಮೇರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ಧಿ ಅವರು ಶುಕ್ರವಾರ ಇಲ್ಲಿನ ಜಿಲ್ಲಾ ಕಾರಾಗೃಹಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಾರಾಗೃಹಗಳಲ್ಲಿ ನಿಷೇಧಿತ ವಸ್ತುಗಳನ್ನು ಸಂಪೂರ್ಣ ತಡೆಗಟ್ಟುವ ನಿಟ್ಟಿನಲ್ಲಿ ಕಾರಾಗೃಹ ಸುಧಾರಣಾ ಸಂಕಲ್ಪ ಅಭಿಯಾನವನ್ನು ಅಲೋಕಕುಮಾರ್ ಅವರು ಆರಂಭಿಸಿದ್ದು, ಇದರ ಭಾಗವಾಗಿ ಜಿಲ್ಲಾ ಕಾರಾಗೃಹದಲ್ಲಿ ಅವರು ಭದ್ರತಾ ಉಪಕರಣಗಳನ್ನು ಎಸ್.ಪಿ. ಪರಿಶೀಲಿಸಿದರು.
ಜಿಲ್ಲಾ ಕಾರಾಗೃಹ ಕೊಪ್ಪಳದ ಅಧೀಕ್ಷಕ ಅಂಬರೀಷ ಎಸ್. ಪೂಜಾರಿ ಅವರು ಎಸ್.ಪಿ. ಅವರಿಗೆ ಲಭ್ಯವಿರುವ ಉಪಕರಣಗಳ ಮಾಹಿತಿ ಒದಗಿಸಿದರು. ಇನ್ನು ಹೆಚ್ಚಿನ ಭದ್ರತಾ ಉಪಕರಣಗಳನ್ನು ಖರೀದಿಸಿ ಯಾವುದೇ ನಿಷೇಧಿತ ವಸ್ತುಗಳು ಕೈದಿಗಳ ಕೈಗೆ ಸಿಗದಂತೆ ಕಟ್ಟುನಿಟ್ಟಿನ ಕ್ರಮ ವಹಿಸುವಂತೆ ಅವರು ಸೂಚಿಸಿದರು.
ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೇಮಂತಕುಮಾರ್, ಡಿವೈಎಸ್‌ಪಿ ಮುತ್ತಣ್ಣ ಸರವಗೋಳ ಹಾಗೂ ಆಂತರಿಕ ಭದ್ರತಾ ವಿಭಾಗದ ವೃತ್ತ ನಿರೀಕ್ಷಕರು ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.