ADVERTISEMENT

ಕೊಪ್ಪಳ | ನಿಖರ ಮಾಹಿತಿ ಒದಗಿಸಲು ಸೂಚನೆ: ಡಾ.ಸುರೇಶ ಬಿ.ಇಟ್ನಾಳ

​ಪ್ರಜಾವಾಣಿ ವಾರ್ತೆ
Published 26 ಜನವರಿ 2026, 7:40 IST
Last Updated 26 ಜನವರಿ 2026, 7:40 IST
ಕೊಪ್ಪಳದಲ್ಲಿ ಗುರುವಾರ ನಡೆದ ಸುಸ್ಥಿರ ಜಿಲ್ಲಾ ಅಭಿವೃದ್ಧಿ ದೂರದೃಷ್ಟಿ ಯೋಜನೆ-2031 ವರದಿ ತಯಾರಿಸುವ ಕುರಿತು ನಡೆದ ತರಬೇತಿ ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದ ಅಧಿಕಾರಿಗಳು 
ಕೊಪ್ಪಳದಲ್ಲಿ ಗುರುವಾರ ನಡೆದ ಸುಸ್ಥಿರ ಜಿಲ್ಲಾ ಅಭಿವೃದ್ಧಿ ದೂರದೃಷ್ಟಿ ಯೋಜನೆ-2031 ವರದಿ ತಯಾರಿಸುವ ಕುರಿತು ನಡೆದ ತರಬೇತಿ ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದ ಅಧಿಕಾರಿಗಳು    

ಕೊಪ್ಪಳ: ‘ಸುಸ್ಥಿರ ಜಿಲ್ಲಾ ಅಭಿವೃದ್ಧಿ ದೂರದೃಷ್ಟಿ ಯೋಜನೆ-2031 ವರದಿ ತಯಾರಿಸುವ ಸಂಬಂಧ ಸಂಪನ್ಮೂಲ ವ್ಯಕ್ತಿಗಳಿಗೆ ವಿವಿಧ ಇಲಾಖೆಯ ಅಧಿಕಾರಿಗಳು ನಿಖರ ಮಾಹಿತಿ ನೀಡಬೇಕು’ ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ ಹೇಳಿದರು.

ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ನಡೆದ ಜಿಲ್ಲಾ ಮಾನವ ಅಭಿವೃದ್ಧಿ ವರದಿ-2025 ಹಾಗೂ ಸಮಗ್ರ ಮತ್ತು ಸುಸ್ಥಿರ ಜಿಲ್ಲಾ ಅಭಿವೃದ್ಧಿ ದೂರದೃಷ್ಟಿ ಯೋಜನೆ-2031 ವರದಿಯನ್ನು ತಯಾರಿಸುವ ಕುರಿತು ವಿವಿಧ ಇಲಾಖೆ ಅಧಿಕಾರಿಗಳಿಗೆ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದ ಅವರು,‘ಕೃಷಿ, ತೋಟಗಾರಿಕೆ, ಪಶು ಸಂಗೋಪನೆ ಸೇರಿದಂತೆ ಇತರೆ ವಿವಿಧ ಇಲಾಖೆಗಳ ಆದಾಯ ಹೇಗೆ ಹೆಚ್ಚಿಸಬೇಕು ಎಂಬುದರ ಕುರಿತು ಮುಂದಾಲೋಚನೆ ಜೊತೆಗೆ ಎಲ್ಲಿ ಸಮಸ್ಯೆಗಳು ಇವೆ. ಅವುಗಳನ್ನು ಹೇಗೆ ಸರಿಪಡಿಸಬೇಕು ಎಂಬುದರ ಕುರಿತು ಎಲ್ಲರೂ ನಿಖರವಾದ ಮಾಹಿತಿ ನೀಡಬೇಕು’ ಎಂದು ನಿರ್ದೇಶನ ನೀಡಿದರು.

‘2022ರ ವರದಿ ಪ್ರಕಾರ ಬಡ ಜಿಲ್ಲೆಗಳ ಪಟ್ಟಿ ತೆಗೆದುಕೊಂಡರೆ ಅದರಲ್ಲಿ ಕೊಪ್ಪಳ ಜಿಲ್ಲೆಯ ಹೆಸರಿದೆ. ನಮ್ಮ ವರದಿ ಜಿಲ್ಲೆಯ ಅಭಿವೃದ್ಧಿಗೆ ಪೂರವಾಗಿರುವುದರ ಜೊತೆಗೆ ನಿಖರವಾಗಿರಬೇಕು. ಈ ಹಿಂದೆ ಉಡುಪಿ ಮತ್ತು ವಿಜಯಪುರ ಜಿಲ್ಲೆಯ ವರದಿಗಳು ರಾಷ್ಟ್ರಮಟ್ಟದಲ್ಲಿ ಒಪ್ಪಿಗೆಯಾಗಿದ್ದವು. ಸರಿಯಾದ ಮಾನದಂಡಗಳಿಗೆ ಅನುಗುಣವಾಗಿಯೇ ಮಾಹಿತಿ ಒದಗಿಸಬೇಕು’ ಎಂದರು.

ADVERTISEMENT

ಜಿಲ್ಲಾ ಪಂಚಾಯಿತಿ ಯೋಜನಾಧಿಕಾರಿ ಡಿ.ಮಂಜುನಾಥ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೆಶಕ ಮಂಜುನಾಥ ಗುಂಡೂರ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಅಜ್ಜಪ್ಪ ಸೊಗಲದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವೈ.ಶೆಟ್ಟೆಪ್ಪನವರ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಗದೀಶ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವಿಠ್ಠಲ ಜಾಬಗೌಡರ್, ಲೀಡ್‌ ಬ್ಯಾಂಕ್‌ ವ್ಯವಸ್ಥಾಪಕ ಮಾರುತಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ಸಂಪನ್ಮೂಲ ವ್ಯಕ್ತಿಗಳು ಭಾಗಿ ಸಂಪನ್ಮೂಲ ವ್ಯಕ್ತಿಗಯಾಗಿದ್ದ ನಿವೃತ್ತ ಜಂಟಿ ನಿರ್ದೆಶಕ ಶ್ರೀನಿವಾಸ ಹಾವೇರಿ ವಿಶ್ವವಿದ್ಯಾಲಯ ಕುಲಸಚಿವ ಹಾಗೂ ಅರ್ಥಶಾಸ್ತ್ರ ಪ್ರಾಧ್ಯಾಪಕ ಪ್ರೊ.ಎಸ್‌.ಟಿ.ಬಾಗಲಕೋಟೆ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಪ್ರೊ.ಎಚ್‌.ಎಚ್‌.ಭರತ್ ನರಗುಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ದುರ್ಗೇಶ ಪೂಜಾರ ಅವರು ಅಭಿವೃದ್ಧಿ ದೂರದೃಷ್ಟಿ ಯೋಜನೆ-2031 ವರದಿ ತಯಾರಿಸುವ ಕುರಿತು ಅಧಿಕಾರಿಗಳಿಗೆ ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.