ADVERTISEMENT

ಕೊಪ್ಪಳ: ಅಧಿವೇಶನದಲ್ಲಿ ಧ್ವನಿ ಎತ್ತಲು ಬ್ಯಾನರ್‌ ಕಟ್ಟಿ ಆಗ್ರಹ

​ಪ್ರಜಾವಾಣಿ ವಾರ್ತೆ
Published 9 ಡಿಸೆಂಬರ್ 2025, 15:56 IST
Last Updated 9 ಡಿಸೆಂಬರ್ 2025, 15:56 IST
   

ಕೊಪ್ಪಳ: ಪರಿಸರಕ್ಕೆ ಮಾಲಿನ್ಯ ಉಂಟು ಮಾಡುತ್ತಿರುವ ಕಾರ್ಖಾನೆಗಳ ವಿಸ್ತರಣೆಗೆ ಅವಕಾಶ ಕೊಡಬಾರದು ಎಂದು ಆಗ್ರಹಿಸಿ ಜಿಲ್ಲಾ ಬಚಾವೊ ಆಂದೋಲನ ಸಮಿತಿ ಹಾಗೂ ಪರಿಸರ ಹಿತರಕ್ಷಣಾ ಜಂಟಿ ಕ್ರಿಯಾ ವೇದಿಕೆ ನಡೆಸುತ್ತಿರುವ ಅನಿರ್ದಿಷ್ಟ ಹೋರಾಟ 40 ದಿನಗಳನ್ನು ಪೂರ್ಣಗೊಳಿಸಿದೆ.

ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿರುವ ಕಾರಣ ಹೋರಾಟಗಾರರು ಮಂಗಳವಾರ ರಾತ್ರಿ ಏಕಾಏಕಿ ನಗರದ ಪ್ರಮುಖ ವೃತ್ತ ಹಾಗೂ ಜನಸಂದಣಿ ಪ್ರದೇಶಗಳಲ್ಲಿ ದೊಡ್ಡ ಬ್ಯಾನರ್‌ಗಳನ್ನು ಅಳವಡಿಸಿ, ಅದರಲ್ಲಿ ಜಿಲ್ಲೆಯ ಜನಪ್ರತಿನಿಧಿಗಳ ಭಾವಚಿತ್ರವನ್ನು ಹಾಕಿ ’ಅಧಿವೇಶನದಲ್ಲಿ ಧ್ವನಿ ಎತ್ತಿ’ ಎನ್ನುವ ಸಂದೇಶ ಬರೆದಿದ್ದಾರೆ. 

ಬಲ್ಡೋಟಾ, ಕಿರ್ಲೋಸ್ಕರ್‌, ಕಲ್ಯಾಣಿ ಸ್ಟೀಲ್‌, ಮುಕುಂದ್‌ ಸುಮಿ ಹಾಗೂ ಎಕ್ಸ್‌ ಇಂಡಿಯಾ ಕಾರ್ಖಾನೆಗಳು ವಿಸ್ತರಣೆಗೆ ಮುಂದಾಗಿದ್ದು ಇದಕ್ಕೆ ಅವಕಾಶ ಕೊಡಬಾರದು ಎಂದು ಬ್ಯಾನರ್‌ನಲ್ಲಿ ಆಗ್ರಹಿಸಿದ್ದಾರೆ. ಇನ್ನೊಂದೆಡೆ ಬಲ್ಡೋಟಾ ಕಾರ್ಖಾನೆ ವಿಸ್ತರಣೆಗೆ ಅವಕಾಶ ಕೊಡಬೇಕು ಎಂದು ಭೂಮಿ ಕಳೆದುಕೊಂಡ ರೈತರು ಅನಿರ್ದಿಷ್ಟ ಹೋರಾಟ ನಡೆಸುತ್ತಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.