ಪೊಲೀಸ್ – ಪ್ರಾತಿನಿಧಿಕ ಚಿತ್ರ
ಕೊಪ್ಪಳ: ಮುಸ್ಲಿಂ ಯುವಕನಿಂದ ಹತ್ಯೆಗೀಡಾದ ಇಲ್ಲಿನ ಕುರುಬರ ಓಣಿಯ ಗವಿಸಿದ್ದಪ್ಪ ನಾಯಕ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮೃತ ವ್ಯಕ್ತಿ ಹಾಗೂ ಅವರ ಕುಟುಂಬದವರ ವಿರುದ್ಧ ಇಲ್ಲಿನ ಮಹಿಳಾ ಠಾಣೆಯಲ್ಲಿ ಫೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
‘ಗವಿಸಿದ್ದಪ್ಪನೇ ನನ್ನ ಮಗಳ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದಾನೆ. ಇದಕ್ಕೆ ಅವರ ಕುಟುಂಬದವರು ಕುಮ್ಮಕ್ಕು ನೀಡಿದ್ದಾರೆ’ ಎಂದು ಕಾನೂನು ಸಂಘರ್ಷಕ್ಕೆ ಒಳಗಾಗಿರುವ ಬಾಲಕಿಯ ತಾಯಿ ದೂರು ನೀಡಿದ್ದಾರೆ.
ಕೊಲೆ ಘಟನೆ ಖಂಡಿಸಿ ಪ್ರತಿಭಟಿಸಿದಾಗ ಗವಿಸಿದ್ದಪ್ಪನ ಕುಟುಂಬದವರು, ‘ಪ್ರೀತಿಸಿದ ಬಾಲಕಿ ಕುಮ್ಮಕ್ಕಿನಿಂದಲೇ ಮಗನ ಕೊಲೆಯಾಗಿದೆ’ ಎಂದು ಆರೋಪಿಸಿದ್ದರು. ನಗರ ಠಾಣೆಯಲ್ಲಿ ದಾಖಲಾಗಿದ್ದ ದೂರಿನಲ್ಲಿಯೂ ಗವಿಸಿದ್ದಪ್ಪನ ತಂದೆ ಬಾಲಕಿ ಹೆಸರನ್ನು ಉಲ್ಲೇಖಿಸಿದ್ದಕ್ಕೆ ಅವರ ತಾಯಿ ಆಕ್ಷೇಪ ವ್ಯಕ್ತಪಡಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.