ADVERTISEMENT

ಕೊಪ್ಪಳ ಬೆಂಕಿ ಅವಘಡ: ಮತ್ತೊಂದು ಮಗು ಸಾವು

ಕೋಮಲಾಪುರ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬೆಂಕಿ ಅವಘಡ

​ಪ್ರಜಾವಾಣಿ ವಾರ್ತೆ
Published 24 ಆಗಸ್ಟ್ 2022, 4:28 IST
Last Updated 24 ಆಗಸ್ಟ್ 2022, 4:28 IST
   

ಕೊಪ್ಪಳ: ಜಿಲ್ಲೆಯ ಕುಕನೂರು ತಾಲ್ಲೂಕಿನ ಕೋಮಲಾಪುರ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬೆಂಕಿ ಅವಘಡದಲ್ಲಿ ಮೃತ ಮಕ್ಕಳ ಸಂಖ್ಯೆ ಎರಡಕ್ಕೆ ಏರಿಕೆಯಾಗಿದೆ.

ಘಟನೆ ನಡೆದ ಸ್ಥಳದಲ್ಲೇ 8 ವರ್ಷದ ಜಯರಾಜ ಮೃತಪಟ್ಟಿದ್ದ.

ಗಂಭೀರವಾಗಿ ಗಾಯಗೊಂಡಿದ್ದ 11 ವರ್ಷದ ವಿನೋದರಾಜನನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ‌‌ ಬಾಲಕ ಬುಧವಾರ ಬೆಳಿಗ್ಗೆ ಮೃತಪಟ್ಟಿದ್ದಾನೆ ಎಂದು ಕುಕನೂರು ಪೊಲೀಸರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.