
ಕೊಪ್ಪಳ: ವಿದೇಶಿ ಪ್ರವಾಸಿ ಸೇರಿದಂತೆ ಇಬ್ಬರು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ ಮತ್ತು ಒಬ್ಬ ಪ್ರವಾಸಿಗನ ಕೊಲೆ ಮಾಡಿದ ಮೂವರು ಅಪರಾಧಿಗಳನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಯಿತು.
ನ್ಯಾಯಾಲಯದ ಆದೇಶ ಬಂದ ಬಳಿಕ ಅಲ್ಲಿನ ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಸೋಮವಾರ ಮಧ್ಯರಾತ್ರಿ ಅಪರಾಧಿಗಳನ್ನು ಕೊಪ್ಪಳದ ಕಾರಾಗೃಹಕ್ಕೆ ಪೊಲೀಸ್ ಬಿಗಿಬಂದೋಬಸ್ತ್‌ನಲ್ಲಿ ಕರೆ ತರಲಾಗಿದೆ. ಮಂಗಳವಾರ ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಯಿತು.
ಗಂಗಾವತಿ ತಾಲ್ಲೂಕಿನ ಸಾಣಾಪುರದಲ್ಲಿ 2025ರ ಮಾರ್ಚ್‌ನಲ್ಲಿ ಇಸ್ರೇಲಿ ಮಹಿಳೆ, ಸ್ಥಳೀಯ ಹೋಂಸ್ಟೇ ಒಡತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿತ್ತು. ಈ ಪ್ರಕರಣದಲ್ಲಿ ಗಂಗಾವತಿಯ ಸಾಯಿನಗರದ ಮಲ್ಲೇಶ್ (ಹಂದಿಮಲ್ಲ), ಸಾಯಿಕುಮಾರ್ ಹಾಗೂ ಶರಣಬಸವರಾಜ ಅವರಿಗೆ ಗಂಗಾವತಿಯ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸಷೆನ್ಸ್ ಕೋರ್ಟ್ ಸೋಮವಾರ ಮರಣ ದಂಡನೆ ಶಿಕ್ಷೆ ವಿಧಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.