
ಪ್ರಜಾವಾಣಿ ವಿಶೇಷಕೊಪ್ಪಳ ಗವಿಮಠದ ಮಹಾರಥೋತ್ಸವ ಸೋಮವಾರ ಅದ್ಧೂರಿಯಾಗಿ ನೆರವೇರಿತು. ಗವಿಮಠಕ್ಕೆ ಬರುವ ಎಲ್ಲಾ ದಿಕ್ಕುಗಳಿಂದಲೂ ಜನ ಪ್ರವಾಹದ ರೀತಿಯಲ್ಲಿ ಬರುತ್ತಿದ್ದರು. ಗೋದೂಳಿಯ ಸಮಯ ಸಮೀಪಿಸುತ್ತಿದ್ದಂತೆಯೇ ಜನ ಮಹಾರಥೋತ್ಸವಕ್ಕೆ ಸಾಕ್ಷಿಯಾಗಿ ಧನ್ಯತಾ ಭಾವ ಮೆರೆದರು. ಗವಿಮಠದ ವಿಶಾಲವಾದ ಆವರಣದಿಂದ ಆರಂಭವಾದ ಮಹಾರಥೋತ್ಸವದ ಯಾತ್ರೆ ಸುರಕ್ಷಿತವಾಗಿ ಪಾದಗಟ್ಟೆ ಮುಟ್ಟಿ ವಾಪಸ್ ಸ್ವ ಸ್ಥಾನಕ್ಕೆ ಬರುತ್ತಿದ್ದಂತೆ ಜನ ಚಪ್ಪಾಳೆ ಹೊಡೆದು ಸಂಭ್ರಮಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.