ADVERTISEMENT

ಕೊಪ್ಪಳ ಉಸ್ತುವಾರಿ ಬದಲು, ಕಲಬುರ್ಗಿಗೆ ಕಾರಜೋಳ ಮುಂದುವರಿಕೆ

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2020, 18:49 IST
Last Updated 9 ಏಪ್ರಿಲ್ 2020, 18:49 IST
ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ
ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ   

ಕಲಬುರ್ಗಿ: ಸಚಿವ ಸಂಪುಟ ಪುನರ್ರಚನೆಯಾದ ಹಲವು ದಿನಗಳ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಗುರುವಾರ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿದ್ದು, ಕಲಬುರ್ಗಿ ಉಸ್ತುವಾರಿಯಾಗಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರೇ ಮುಂದುವರಿದಿದ್ದಾರೆ.

ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಕೃಷಿ ಸಚಿವ ಬಿ.ಸಿ. ಪಾಟೀಲ ಅವರನ್ನು ನೇಮಕ ಮಾಡಿದ್ದಾರೆ.
ಇಲ್ಲಿಯವರೆಗೆ ಕೊಪ್ಪಳ ಜಿಲ್ಲೆಯ ಉಸ್ತುವಾರಿ ಹೊಣೆ ಹೊತ್ತಿದ್ದ ಲಕ್ಷ್ಮಣ ಸವದಿ ಅವರಿಗೆ ರಾಯಚೂರು ಜಿಲ್ಲಾ ಉಸ್ತುವಾರಿ ನೀಡಲಾಗಿದೆ.

ರಾಯಚೂರು ಉಸ್ತುವಾರಿಯಾಗಿ ಹೆಚ್ಚುವರಿ ಕಾರ್ಯಭಾರ ಹೊಂದಿದ್ದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಅವರಿಗೆ ಚಿತ್ರದುರ್ಗ ಜಿಲ್ಲೆಗೆ ಸೀಮಿತಗೊಳಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.