ADVERTISEMENT

ಕೊಪ್ಪಳ| ಇನ್ನೂ ಬೆಳೆಯಬೇಕಿದೆ ಉದ್ಯಮ: ಜಿಲ್ಲಾಧಿಕಾರಿ ಸುರೇಶ ಇಟ್ನಾಳ

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2025, 6:18 IST
Last Updated 18 ಅಕ್ಟೋಬರ್ 2025, 6:18 IST
<div class="paragraphs"><p>ಕೊಪ್ಪಳದಲ್ಲಿ&nbsp;ಗುರುವಾರ ನಡೆದ ಅರಿವು ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಸುರೇಶ ಇಟ್ನಾಳ ಮಾತನಾಡಿದರು</p></div>

ಕೊಪ್ಪಳದಲ್ಲಿ ಗುರುವಾರ ನಡೆದ ಅರಿವು ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಸುರೇಶ ಇಟ್ನಾಳ ಮಾತನಾಡಿದರು

   

ಕೊಪ್ಪಳ: ‘ನಮ್ಮಲ್ಲಿ ಇನ್ನೂ ಹೆಚ್ಚಿನ ರೀತಿಯಲ್ಲಿ ಉದ್ಯಮ ಬೆಳವಣಿಗೆಯಾಗಬೇಕಾದ ಅವಶ್ಯಕತೆಯಿದ್ದು, ಅದಕ್ಕಾಗಿ ಉದ್ಯಮ ಪ್ರಾರಂಭಿಸುವವರಿಗೆ ವಿವಿಧ ಇಲಾಖೆಗಳಿಂದ ಅಗತ್ಯ ಸಹಕಾರ ಸಿಗುತ್ತಿದೆ’ ಎಂದು ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ ಹೇಳಿದರು.

ಗುರುವಾರ ನಗರದಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನಾ ಕೇಂದ್ರ (ವಿ.ಟಿ.ಪಿ.ಸಿ) ಹಾಗೂ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಸಹಯೋಗದಲ್ಲಿ ಎಂಎಸ್‌ಎಂಇಗಳ ಕಾರ್ಯಕ್ಷಮತೆ ಹೆಚ್ಚಿಸುವುದು ಮತ್ತು ವೇಗಗೊಳಿಸುವ ಉದ್ದೇಶದಿಂದ ರ‍್ಯಾಂಪ್ ಯೋಜನೆಯಡಿ ಝಡ್.ಇ.ಡಿ-ಲೀನ್ ಯೋಜನೆ ಕುರಿತು ಹಮ್ಮಿಕೊಂಡಿದ್ದ ಅರಿವು ಕಾರ್ಯಕ್ರಮ ಅವರು ಉದ್ಘಾಟಿಸಿ ಮಾತನಾಡಿದರು.

ADVERTISEMENT

‘2011ರ ಜನಗಣತಿ ಪ್ರಕಾರ ಜಿಲ್ಲೆಯಲ್ಲಿ 13.89 ಲಕ್ಷ ಜನ ಇದ್ದು, ಪ್ರಸ್ತುತ ಅಂದಾಜು 17 ಲಕ್ಷ 15 ಸಾವಿರ ಜನ ಇದ್ದಾರೆ. ಅದರಲ್ಲಿ ಉದ್ಯಮ ಪ್ರಮಾಣಪತ್ರಕ್ಕೆ ನೋಂದಣಿ ಮಾಡಿಕೊಂಡವರು 4,000 ಜನ ಮಾತ್ರ. ಎಂಎಸ್‌ಎಂಇಯಲ್ಲಿ ಸಹಾಯಧನ ಪಡೆದವರ ಸಂಖ್ಯೆ ಕಡಿಮೆಯಿದೆ’ ಎಂದರು.

‘ಮೇಕ್ ಇನ್ ಇಂಡಿಯಾ ಯೋಜನೆಯಡಿ ನಾವೆಲ್ಲರೂ ಒಟ್ಟುಗೂಡಿ ಉಪಯುಕ್ತ ಉತ್ಪನ್ನಗಳನ್ನು ಸ್ಥಳೀಯವಾಗಿ ಉತ್ಪಾದಿಸಿ ಹೆಚ್ಚಿನ ಲಾಭ ಪಡೆದು, ದೇಶದ ಜಿಡಿಪಿ ಬೆಳವಣಿಗೆಗೆ ಕೊಡುಗೆ ನೀಡಿದಾಗ ಮೇಕ್ ಇನ್ ಇಂಡಿಯಾ ಯೋಜನೆಗೆ ಅರ್ಥ ಸಿಗುತ್ತದೆ’ ಎಂದು ಸಲಹೆ ನೀಡಿದರು.

ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಮನ್ಸೂರ್ ಅವರು ಮಾತನಾಡಿ‘ಎಂಎಸ್‌ಎಂಇ ಎನ್ನುವುದು ಕೇಂದ್ರ ಸರ್ಕಾರದ ಯೋಜನೆಯಾಗಿದೆ. ಇವುಗಳ ಕಾರ್ಯಕ್ರಮತೆ ಹೆಚ್ಚಿಸುವುದು ಗುರಿಯಾಗಿದೆ. ದೇಶದ ಜಿಡಿಪಿಯಲ್ಲಿ ಸಣ್ಣ ಕೈಗಾರಿಕ್ಷಾ ಕ್ಷೇತ್ರದ ಪಾಲು ಶೇ. 45ರಷ್ಟು ಇದೆ’ ಎಂದು ತಿಳಿಸಿದರು.

ಕೃಷಿ ಇಲಾಖೆ ಜಂಟಿ ನಿರ್ದೇಶಕ ಟಿ.ಎಸ್. ರುದ್ರೇಶಪ್ಪ, ಕಾಸಿಯಾ ಉಪಾಧ್ಯಕ್ಷ ಲಿಂಗಣ್ಣ ಎಸ್. ಬಿರಾದಾರ, ಕಾಸಿಯಾ ಜಂಟಿ ಕಾರ್ಯದರ್ಶಿ (ನಗರ) ಕೇಶವ ಮೂರ್ತಿ ಆರ್., ಜಂಟಿ ಕಾರ್ಯದರ್ಶಿ (ಗ್ರಾಮೀಣ) ದಿನೇಶ್ ಕುಮಾರ, ಜಿಲ್ಲಾ ಕಾಸಿಯಾ ಅಭಿವೃದ್ಧಿ ಸಮಿತಿ, ಪ್ಯಾನಲ್ ಅಧ್ಯಕ್ಷೆ ಪುಷ್ಪಲತಾ, ಶಿವಕುಮಾರ್ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ಕೊಪ್ಪಳದಲ್ಲಿ ಗುರುವಾರ ನಡೆದ ಅರಿವು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಕಿರು ಉದ್ಯಮಿಗಳು