ಪ್ರಾಕೃತಿಕವಾಗಿ ಸಂಪದ್ಭರಿತವಾಗಿರುವ ಕೊಪ್ಪಳ ದಿನದಿಂದ ದಿನಕ್ಕೆ ಕಲುಷಿತಗೊಳ್ಳುತ್ತಿದೆ. ಕೊಪ್ಪಳ ಹಾಗೂ ಸುತ್ತಮುತ್ತಲಿನ 25ಕ್ಕೂ ಹೆಚ್ಚು ಗ್ರಾಮಗಳ ಜನ ಕೈಗಾರಿಕೆಗಳು ನಿತ್ಯ ಹೊರ ಸೂಸುತ್ತಿರುವ ಕಪ್ಪು ದೂಳಿನಿಂದಾಗಿ ಜನ ತತ್ತರಿಸಿ ಹೋಗಿದ್ದಾರೆ. ಆದರೆ, ಅವರ ಸಂಕಷ್ಟ ಮತ್ತಷ್ಟು ಹೆಚ್ಚಿದೆ. ಕಾರಣ, ಕೊಪ್ಪಳದಲ್ಲಿ ಬಲ್ಡೋಟಾ ಸ್ಟೀಲ್ ಮತ್ತು ಪವರ್ ಲಿಮಿಟೆಡ್ ಕಂಪನಿ, ಕಿರ್ಲೋಸ್ಕರ್ ಫೆರಸ್ ಲಿಮಿಟೆಡ್ ಮತ್ತು ಸೆರೆನಾಟಿಕಾ ರಿನಿವಬಲ್ಸ್ ಇಂಡಿಯಾ ಪ್ರವೈಟ್ ಲಿಮಿಟೆಡ್ ಕಾರ್ಖಾನೆಗಳ ವಿಸ್ತರಣೆಗೆ ರಾಜ್ಯ ಸರ್ಕಾರ ಒಪ್ಪಂದ ಮಾಡಿಕೊಂಡಿರುವುದು. ಈಗಾಗಲೇ, ಇಲ್ಲಿನ ಹಲವು ಕೈಗಾರಿಕೆಗಳಿಂದ ಬರುವ ದೂಳಿನಿಂದ ಜನರ ಆರೋಗ್ಯದ ಮೇಲೆ ಗಂಭೀರ ಪರಿಣಾಮವಾಗಿದ್ದು, ಸ್ಥಳೀಯರು ನಿರಂತರವಾಗಿ ಪ್ರತಿಭಟಿಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.