
ಕೊಪ್ಪಳ ಜಿಲ್ಲಾ ಕಾರಾಗೃಹದಲ್ಲಿ ಎಸ್.ಪಿ. ಡಾ. ರಾಮ್ ಎಲ್. ಅರಸಿದ್ಧಿ ಅವರು ಗುರುವಾರ ತಪಾಸಣೆ ನಡೆಸಿದರು
ಪ್ರಜಾವಾಣಿ ವಾರ್ತೆ
ಕೊಪ್ಪಳ: ಇಲ್ಲಿನ ಜಿಲ್ಲಾ ಕಾರಾಗೃಹಕ್ಕೆ ಗುರುವಾರ ದಿಢೀರ್ ಭೇಟಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್. ಅರಸಿದ್ಧಿ ಅವರು ತಪಾಸಣೆ ನಡೆಸಿದರು.
ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೇಮಂತಕುಮಾರ್, ಡಿವೈಎಸ್‌ಪಿ ಸೇರಿದಂತೆ 40ಕ್ಕೂ ಹೆಚ್ಚು ಜನ ಪೊಲೀಸರು ಜೈಲಿಗೆ ಭೇಟಿ ನೀಡಿ ಅಲ್ಲಿದ್ದ ಸಾಮಗ್ರಿಗಳನ್ನು ಪರಿಶೀಲಿಸಿದರು.
ಬಳಿಕ ಕಾರಾಗೃಹದಲ್ಲಿ ಯಾವುದೇ ನಿಷೇಧಿತ ವಸ್ತುಗಳು ಒಳನುಸುಳದಂತೆ ಎಚ್ಚರಿಕೆ ವಹಿಸಬೇಕು. ಕಾರಾಗೃಹದ ವಿಚಾರಣಾಧೀನ ಕೈದಿಗಳು ಯಾವುದೇ ಅಕ್ರಮ ಎಸಗದಂತೆ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಕಾರಾಗೃಹದ ಅಧೀಕ್ಷಕ ಅಂಬರೀಷ್ ಎಸ್.ಪೂಜಾರಿ ಅವರಿಗೆ ಸೂಚಿಸಿದರು.
ಕಾರಾಗೃಹದ ನಿಯಮಾವಳಿಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಜೀವನದಲ್ಲಿ ಬದಲಾವಣೆ ಕಂಡುಕೊಳ್ಳಬೇಕು ಎನ್ನುವ ಸಲಹೆಯನ್ನೂ ನೀಡಿದರು ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.