ಕೊಪ್ಪಳ: ತಾಲ್ಲೂಕಿನ ಇರಕಲ್ಲಗಡ ಹೋಬಳಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ₹7.74 ಕೋಟಿಯ ಅಭಿವೃದ್ಧಿ ಕಾರ್ಯಗಳಿಗೆ ಗಂಗಾವತಿ ಕ್ಷೇತ್ರದ ಶಾಸಕ ಜನಾರ್ದನ ರೆಡ್ಡಿ ಶನಿವಾರ ಚಾಲನೆ ನೀಡಿದರು.
ಬಳಿಕ ಮಾತನಾಡಿ ‘ಇರಕಲ್ಲಗಡ ಹೋಬಳಿಗೆ ನೀಡಿದ್ದ ಮೂರು ಭರವಸೆಗಳ ಪೈಕಿ ಎರಡು ಭರವಸೆ ಈಡೇರಿಸಲು ಈಗಾಗಲೇ ಸುಮಾರು ₹106 ಕೋಟಿ ವೆಚ್ಚದಲ್ಲಿ ಕುಡಿಯುವ ನೀರು ಪೂರೈಕೆ ಹಾಗೂ ಸುಮಾರು ₹150 ಕೋಟಿ ವೆಚ್ಚದಲ್ಲಿ ಕೆರೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಆದಷ್ಟು ಬೇಗನೆ ನೀರಾವರಿ ಸೌಲಭ್ಯ ಕಲ್ಪಿಸಲಾಗುವುದು’ ಎಂದರು.
ವಿಧಾನ ಪರಿಷತ್ ಮಾಜಿ ಸದಸ್ಯ ಕರಿಯಣ್ಣ ಸಂಗಟಿ, ಮುಖಂಡರಾದ ಸಂಗಮೇಶ್ ಬಾದವಾಡಗಿ, ಮನೋಹರ್ ಗೌಡ ಹೇರೂರು, ಯಮನೂರ್ ಚೌಡ್ಕಿ, ಇರಕಲ್ಲಗಡ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಿವಮ್ಮ ಶೇಖರಪ್ಪ ಲಮಾಣಿ, ಅರಸಿನಕೆರೆ ಗ್ರಾ.ಪಂ ಅಧ್ಯಕ್ಷ ಬಾಳಪ್ಪ, ತಾ.ಪಂ ಮಾಜಿ ಸದಸ್ಯ ಗಂಗಾಧರ ಸ್ವಾಮಿ, ರಮೇಶ್ ರೆಡ್ಡಿ, ದುರ್ಗಪ್ಪ ದಳಪತಿ, ಚಂದ್ರು ಹೀರೂರು, ಬಸವ ಕುಮಾರ ಪಟ್ಟಣಶಟ್ಟಿ ಸೇರಿ ಅನೇಕರು ಪಾಲ್ಗೊಂಡಿದ್ದರು.
ಬಳಿಕ ಶಾಸಕರ ಕಾರ್ಯಾಲಯದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಹೋಬಳಿ ಮಟ್ಟದ ಜನ ಸಂಪರ್ಕ ಸಭೆ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.