ADVERTISEMENT

ಕುಮ್ಮಟದುರ್ಗೋತ್ಸವ: ಭಿತ್ತಿಪತ್ರ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 27 ಜೂನ್ 2022, 4:29 IST
Last Updated 27 ಜೂನ್ 2022, 4:29 IST
ಕೊಪ್ಪಳದಲ್ಲಿ ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ ಭಿತ್ತಿಪತ್ರ ಬಿಡುಗಡೆ ಮಾಡಿದರು
ಕೊಪ್ಪಳದಲ್ಲಿ ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ ಭಿತ್ತಿಪತ್ರ ಬಿಡುಗಡೆ ಮಾಡಿದರು   

ಕೊಪ್ಪಳ: ನಗರದ ಸಾಹಿತ್ಯ ಭವನದಲ್ಲಿ ಜುಲೈ 10 ರಂದು ಗಂಡುಗಲಿ ಕುಮಾರರಾಮ ಸ್ಮರಣೆ ಕಾರ್ಯಕ್ರಮ ನಡೆಯಲಿದ್ದು, ಅದರಲ್ಲಿ ಜರುಗುವ ಕುಮ್ಮಟದುರ್ಗೋತ್ಸವದ ಭಿತ್ತಿಪತ್ರವನ್ನು ಗವಿಮಠದ ಆವರಣದಲ್ಲಿ ಗವಿಶ್ರೀ ಭಾನುವಾರ ಬಿಡುಗಡೆ ಮಾಡಿದರು.

ಬಳಿಕ ಮಾತನಾಡಿದ ಅವರು,‘ಇತಿಹಾಸ ಸ್ಮರಿಸುವ ಕೆಲಸ ನಿರಂತರವಾಗಿ ನಡೆಯಬೇಕು. ಜನರಿಗೆ ಸರಿಯಾದ ಮಾಹಿತಿ ತಲುಪಿಸುವುದು ನಮ್ಮ ಕರ್ತವ್ಯ’ ಎಂದು ಅವರು ಹೇಳಿದರು.

ಜು.10ರಂದು ನಡೆಯುವ ಕಾರ್ಯಕ್ರಮದಲ್ಲಿ ನಟ ಶಶಿಕುಮಾರ ಅವರಿಗೆ ಗಂಡುಗಲಿ ಕುಮಾರರಾಮ ಕಲಾರತ್ನ ರಾಜ್ಯ ಪ್ರಶಸ್ತಿ ,ಐಪಿಎಸ್ ಅಧಿಕಾರಿ ರವಿ ಡಿ.ಚನ್ನಣ್ಣವರ ಅವರಿಗೆ ಯೂಥ್ ಐಕಾನ್ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಕುಮಾರ ರಾಮನ ಕುರಿತು ನಾಟಕ ಪ್ರದರ್ಶನ, ಕಲಾವಿದರಿಂದ ಹಾಸ್ಯ, ನೃತ್ಯ ಮತ್ತು ಸಂಗೀತ ಕಾರ್ಯಕ್ರಮಗಳು ಹಾಗೂ ವಿಶೇಷ ಐತಿಹಾಸಿಕ ಗೋಷ್ಠಿ ಜರುಗಲಿದೆ.

ADVERTISEMENT

ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್, ಸಚಿವ ಹಾಲಪ್ಪ ಆಚಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ, ಸಾರಿಗೆ ಹಾಗೂ ಪರಿಶಿಷ್ಟ ಪಂಗಡ ಕಲ್ಯಾಣ ಸಚಿವ ಸಚಿವ ಬಿ.ಶ್ರೀರಾಮುಲು, ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ, ಮಾಜಿ ಸಂಸದ ಉಗ್ರಪ್ಪ ಸೇರಿ ಹಲವರು ಭಾಗವಹಿಸಲಿದ್ದಾರೆ.

ಸ್ವರಭಾರತಿ ಗ್ರಾಮೀಣಾಭಿವೃದ್ಧಿ ಮತ್ತು ಸಾಂಸ್ಕೃತಿಕ ಸಂಸ್ಥೆ ಸಹಯೋಗದಲ್ಲಿ ಸಮಾರಂಭ ನಡೆಯಲಿದ್ದು, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ, ನಗರಾಭಿವೃದ್ಧಿ ಪ್ರಾಧಿಕಾರ, ಪ್ರವಾಸೋದ್ಯಮ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರ ಕೋರಲಾಗಿದೆ ಎಂದು ತಿಳಿಸಿದರು. ಸಂಘಟಕ ಮಂಜುನಾಥ ಜಿ.ಗೊಂಡಬಾಳ, ಕಜಾಪ ಕಾರ್ಯದರ್ಶಿ ಉಮೇಶಬಾಬು ಸುರ್ವೆ, ಸತೀಶ ಕಾತರಕಿ, ಕಲಾವಿದರಾದ ಸಲ್ಮಾನ್ ಖಾನ್ ಬೇವೂರ, ಸಾಹಿತ್ಯ ಗೊಂಡಬಾಳ, ಅಕ್ಷರ ಗೊಂಡಬಾಳ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.