ವಾಲ್ಮೀಕಿ ಸಮುದಾಯದ ಯುವಕ ಗವಿಸಿದ್ಧಪ್ಪ ನಾಯಕ ಕೊಲೆ ಖಂಡಿಸಿ ಕೊಪ್ಪಳದಲ್ಲಿ ಸೋಮವಾರ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಸೇರಿದ್ದ ಜನ
ಚಿತ್ರ: ಭರತ್ ಕಂದಕೂರ
ಕೊಪ್ಪಳ: ಆಗಸ್ಟ್ 3ರಂದು ವಾಲ್ಮೀಕಿ ಸಮುದಾಯದ ಗವಿಸಿದ್ಧಪ್ಪ ನಾಯಕ ಅವರನ್ನು ಮುಸ್ಲಿಂ ಯುವಕ ಕೊಲೆ ಮಾಡಿರುವುದನ್ನು ಖಂಡಿಸಿ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ನೇತೃತ್ವದಲ್ಲಿ ಸೋಮವಾರ ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು.
ಕೊಲೆಯಾದ ಯುವಕನ ಪೋಷಕರ ಮನವಿ ಮೇರೆಗೆ ವ್ಯಾಪಾರಿಗಳು ಅಂಗಡಿಗಳನ್ನು ಸಂಪೂರ್ಣ ಬಂದ್ ಮಾಡಿ ಹೋರಾಟದಲ್ಲಿ ಭಾಗಿಯಾದರು. ಮೆರವಣಿಯಲ್ಲಿ ಸಾವಿರಾರು ಜನ ಸೇರಿದ್ದರು.
ಮಾಜಿ ಸಚಿವ ರಾಜೂಗೌಡ ನಾಯಕ ಮಾತನಾಡಿ, ‘ಪ್ರತಿಭಟನೆಯಲ್ಲಿ ವಾಲ್ಮೀಕಿ ಸಮುದಾಯ ಮಾತ್ರವಲ್ಲ; ಕೊಪ್ಪಳದ ಸಮಸ್ತ ಹಿಂದೂಗಳು ಭಾಗಿಯಾಗಿದ್ದರಿಂದ ಸಮಾಜದ ಶಕ್ತಿ ಸಾಬೀತಾಗಿದೆ. ಯುವಕನನ್ನು ಸುಪಾರಿ ನೀಡಿ ಕೊಲೆ ಮಾಡಿಸಲಾಗಿದೆ’ ಎಂದು ಆರೋಪಿಸಿದರು.
ಮುಂಜಾಗ್ರತೆಯಾಗಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಿದ್ದು, ಬಳ್ಳಾರಿ ವಲಯದ ಐಜಿಪಿ ವರ್ತಿಕಾ ಕಟಿಯಾರ್, ಎಸ್‌ಪಿ ಡಾ.ರಾಮ್ ಎಲ್. ಅರಸಿದ್ಧಿ ಭದ್ರತಾ ವ್ಯವಸ್ಥೆ ನೇತೃತ್ವ ವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.