ADVERTISEMENT

ಬಿಸಿಯೂಟಕ್ಕೆ ಕಳಪೆ ಗುಣಮಟ್ಟದ ಸಾಮಗ್ರಿ:ಗುತ್ತಿಗೆದಾರರ ವಿರುದ್ದ ಕ್ರಮಕ್ಕೆ ಆಗ್ರಹ

Manavi

​ಪ್ರಜಾವಾಣಿ ವಾರ್ತೆ
Published 28 ಡಿಸೆಂಬರ್ 2025, 7:43 IST
Last Updated 28 ಡಿಸೆಂಬರ್ 2025, 7:43 IST
ಕೊಪ್ಪಳದಲ್ಲಿ ಶುಕ್ರವಾರ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಯುನಿಯನ್ ಪದಾಧಿಕಾರಿಗಳು ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ ಅವರಿಗೆ ಮನವಿ ಸಲ್ಲಿಸಿದರು
ಕೊಪ್ಪಳದಲ್ಲಿ ಶುಕ್ರವಾರ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಯುನಿಯನ್ ಪದಾಧಿಕಾರಿಗಳು ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ ಅವರಿಗೆ ಮನವಿ ಸಲ್ಲಿಸಿದರು   

ಕೊಪ್ಪಳ: ಬಿಸಿಯೂಟ ಯೋಜನೆಗೆ ಕಳಪೆ ಗುಣಮಟ್ಟದ ಆಹಾರ ಸಾಮಗ್ರಿಗಳನ್ನು ಪೂರೈಕೆ ಮಾಡುತ್ತಿರುವ ಏಜೆನ್ಸಿ ಹಾಗೂ ಗುತ್ತಿಗೆದಾರರ ವಿರುದ್ದ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಯುನಿಯನ್ (ಐ.ಎಫ್.ಟಿ.ಯು. ಸೇರ್ಪಡೆ) ಜಿಲ್ಲಾ ಮಂಡಳಿ ನೇತೃತ್ವದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಸುರೇಶ್ ಬಿ.ಇಟ್ನಾಳ ಅವರಿಗೆ ಮನವಿ ಸಲ್ಲಿಸಲಾಯಿತು.

ಜಿಲ್ಲೆಯ ಸರ್ಕಾರಿ ಅನುದಾನವನ್ನು ಪಡೆಯುವ ಖಾಸಗಿ ಶಾಲೆಗಳಿಗೆ ತೀರಾ ಕಳಪೆ ಗುಣಮಟ್ಟದ ಆಹಾರ ಸಾಮಗ್ರಿ ಪೂರೈಕೆ ಮಾಡುತ್ತಿರುವ ಭ್ರಷ್ಟ ಏಜೆನ್ಸಿ ಹಾಗೂ ಗುತ್ತಿಗೆದಾರರ ವಿರುದ್ದ ಪ್ರಕರಣ ದಾಖಲಿಸಬೇಕು. ಗುತ್ತಿಗೆದಾರರ ವಿರುದ್ದ ಕ್ರಮ ವಹಿಸಬೇಕು, ಕೆಟ್ಟ ಆಹಾರದಿಂದ ಮಕ್ಕಳ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ. ಮುಂಚೆ ಕೆಲವು ಶಾಲೆಯ ಮಕ್ಕಳು ಬಿಸಿಯೂಟ ಸೇವೆಯಿಂದ ಅನಾರೋಗ್ಯಕ್ಕಿಡಾಗಿ ಆಸ್ಪತ್ರೆಗೆ ದಾಖಲಾಗಿದ್ದ ಘಟನೆಗಳು ನಡೆದಿವೆ ಎಂದು ಮನವಿಯಲ್ಲಿ ಹೇಳಿದ್ದಾರೆ.

ಆಹಾರ ಸಾಮಗ್ರಿ ಅಡುಗೆಗೆ ಬಳಸಲು ಯೋಗ್ಯವಿಲ್ಲ ಎನ್ನುವುದು ಗೊತ್ತಿದ್ದರೂ ಅದನ್ನೆ ಸ್ವಚ್ಚಗೊಳಿಸಿ ಅಡುಗೆಗೆ ಬಳಸಲು ಅಧಿಕಾರಿಗಳು ಹಾಗೂ ಶಾಲಾ ಮುಖ್ಯೋಪಾಧ್ಯಾಯರು ಅಡುಗೆಯವರ ಮೇಲೆ ಒತ್ತಡ ಹಾಕುತ್ತಿದ್ದಾರೆ ಎಂದು ಆರೋಪಿಸಿದರು.

ADVERTISEMENT

ಭಾರತೀಯ ಕಾರ್ಮಿಕ ಸಂಘಟನೆಗಳ ಒಕ್ಕೂಟದ ಮುಖ್ಯ ಸಂಚಾಲಕ ಬಸವರಾಜ ಶೀಲವಂತರ, ಎಸ್.ಎ.ಗಫಾರ್‌, ಗಾಳೆಪ್ಪ ಮುಂಗೋಲಿ, ಮಖಬೂಲ್ ರಾಯಚೂರು, ಶಿವಪ್ಪ ಹಡಪದ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.