ಜೈಲು (ಪ್ರಾತಿನಿಧಿಕ ಚಿತ್ರ)
ಕೊಪ್ಪಳ: ಜಿಲ್ಲೆಯ ಕುಷ್ಟಗಿ ತಾಲ್ಲೂಕಿನಲ್ಲಿ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿ, ಅಪಹರಿಸಿದ ಆರೋಪ ಸಾಬೀತಾಗಿದ್ದು ಅಪರಾಧಿ ಮಹಾಂತೇಶ ಭೀಮಪ್ಪ ಟಕ್ಕಳಕಿ ಎಂಬಾತನಿಗೆ ಇಲ್ಲಿನ ಫೋಕ್ಸೊ ನ್ಯಾಯಾಲಯದ ನ್ಯಾಯಾಧೀಶರಾದ ಕುಮಾರ ಡಿ.ಕೆ ಅವರು 20 ವರ್ಷ ಜೈಲು ಹಾಗೂ ₹20 ಸಾವಿರ ದಂಡ ವಿಧಿಸಿ ಆದೇಶಿಸಿದ್ದಾರೆ.
ಕುಷ್ಟಗಿ ತಾಲ್ಲೂಕಿನ ತೋಪಲಕಟ್ಟಿ ಗ್ರಾಮದ ಮಹಾಂತೇಶ ಪ್ರೀತಿಸಿ ವಿವಾಹವಾಗುವುದಾಗಿ ಬಾಲಕಿಯನ್ನು ನಂಬಿಸಿದ್ದು, ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಾಗ ಮನೆಯ ಹಿಂದಿನ ಶೆಡ್ಡಿಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದ. ಹೊಲಕ್ಕೆ ಕರೆದುಕೊಂಡು ಹೋಗಿ ಇದೇ ಕೃತ್ಯ ಮಾಡಿದ್ದ. ಬಳಿಕ ಅಪಹರಿಸಿ ಬಾಲ್ಯವಿವಾಹವಾಗಿದ್ದ.
2023ರಲ್ಲಿ ಈ ಕುರಿತು ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ತನಿಖೆಯನ್ನು ಸಿಪಿಐ ನಿಂಗಪ್ಪ ಎನ್.ಆರ್. ನಿರ್ವಹಿಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಗೌರಮ್ಮ ದೇಸಾಯಿ ವಾದ ಮಂಡಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.