ADVERTISEMENT

ಶಿಕ್ಷಕರ ಬೇಡಿಕೆಗಳ ಬಗ್ಗೆ ಸರ್ಕಾರ ಗಮನಹರಿಸಲಿ:ಕೈಗೆ ಕಪ್ಪುಪಟ್ಟಿಧರಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 9 ಜನವರಿ 2026, 7:12 IST
Last Updated 9 ಜನವರಿ 2026, 7:12 IST
ಬೇಡಿಕೆಗಳ ಈಡೇರಿಕೆಗಾಗಿ ಪ್ರಾಥಮಿಕ ಶಾಲಾ ಶಿಕ್ಷಕರು ಕೊಪ್ಪಳದಲ್ಲಿ ಕಪ್ಪು ಬಟ್ಟೆ ಕಟ್ಟಿಕೊಂಡು ಓದು ಕರ್ನಾಟಕ ತರಬೇತಿಗೆ ಹಾಜರಾದರು
ಬೇಡಿಕೆಗಳ ಈಡೇರಿಕೆಗಾಗಿ ಪ್ರಾಥಮಿಕ ಶಾಲಾ ಶಿಕ್ಷಕರು ಕೊಪ್ಪಳದಲ್ಲಿ ಕಪ್ಪು ಬಟ್ಟೆ ಕಟ್ಟಿಕೊಂಡು ಓದು ಕರ್ನಾಟಕ ತರಬೇತಿಗೆ ಹಾಜರಾದರು   

ಕೊಪ್ಪಳ: ಪ್ರಾಥಮಿಕ ಶಾಲಾ ಶಿಕ್ಷಕರ ವಿವಿಧ ಬೇಡಿಕೆಗಳ ಬಗ್ಗೆ ಸರ್ಕಾರ ಗಮನ ಹರಿಸಬೇಕು ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಶರಣಬಸವನಗೌಡ ಪಾಟೀಲ ಸರ್ಕಾರವನ್ನು ಒತ್ತಾಯಿಸಿದರು.

ಅಖಿಲ ಭಾರತ ಪ್ರಾಥಮಿಕ ಶಾಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹಾಗೂ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರ್ದೇಶನದ ಮೇರೆಗೆ ಕರ್ತವ್ಯ ನಿರ್ವಹಿಸುವ ಸ್ಥಳಗಳಲ್ಲಿ ಕಪ್ಪು ಬಟ್ಟೆ ಕಟ್ಟಿಕೊಂಡು ಕೆಲಸ ಮಾಡುವ ಅಂಗವಾಗಿ ಓದು ಕರ್ನಾಟಕ ತರಬೇತಿ ಪ್ರಾರಂಭದ ಪೂರ್ವದಲ್ಲಿ ಹಮ್ಮಿಕೊಂಡಿದ್ದ ಸಭೆ ಉದ್ದೇಶಿಸಿ ಮಾತನಾಡಿ ‘ಪ್ರಾಥಮಿಕ ಶಾಲಾ ಶಿಕ್ಷಕರ ವೃಂದ ಮತ್ತು ನೇಮಕಾತಿ ನಿಯಮಗಳು ಪುರಾತನ ಕಾಲದಾಗಿದ್ದು ಕೂಡಲೇ ಅವುಗಳನ್ನು ಬದಲಾವಣೆ ಮಾಡುವ ಮೂಲಕ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ ನೀಡುವ ಕಾರ್ಯವಾಗಬೇಕು. ಸೇವಾನಿರತ ಶಿಕ್ಷಕರಿಗೆ ಕಡ್ಡಾಯವಾಗಿ ಟಿ.ಇ.ಟಿ. ಉತ್ತೀರ್ಣವಾಗಬೇಕು ಎನ್ನುವ ನಿಯಮ ಕೈಬಿಡಬೇಕು’ ಎಂದು ಆಗ್ರಹಿಸಿದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರ್ದೇಶಕರಾದ ಬೀರಪ್ಪ ಅಂಡಗಿ, ನಿರ್ದೇಶಕರಾದ ಬಸವರಾಜ ಜೀರ, ಶ್ರೀಪತಿ ಹಳ್ಳಿಕೇರಿ, ಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ಪೂರ್ಣಿಮಾ ಪಟ್ಟಣಶೆಟ್ಟಿ, ನಾಗರಾಜ.ಎಚ್ ಸೇರಿದಂತೆ ಮುಂತಾದವರು ಹಾಜರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.