ADVERTISEMENT

ಶಿವಾಜಿ ಮಹಾರಾಜರು ಯುವ ಪೀಳಿಗೆಗೆ ಸ್ಫೂರ್ತಿ: ಶಾಸಕ ರಾಘವೇಂದ್ರ ಹಿಟ್ನಾಳ

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2026, 7:21 IST
Last Updated 26 ಫೆಬ್ರುವರಿ 2026, 7:21 IST
ಕೊಪ್ಪಳದಲ್ಲಿ ನಡೆದ ಛತ್ರಪತಿ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಜನ
ಕೊಪ್ಪಳದಲ್ಲಿ ನಡೆದ ಛತ್ರಪತಿ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಜನ   

ಕೊಪ್ಪಳ: ‘ಶಿವಾಜಿ ಮಹಾರಾಜರು ದೇಶ ಕಂಡ ಅಪ್ರತಿಮ ರಾಷ್ಟ್ರಪ್ರೇಮಿ ಹಾಗೂ ಶೂರ ಯೋಧರಾಗಿದ್ದು, ಅವರ ಜಯಂತಿ ಆಚರಿಸುವುದರಿಂದ ಅವರು ನೀಡಿದ ಸೇನಾ ಹಾಗೂ ಆಡಳಿತಾತ್ಮಕ ಮೌಲ್ಯಗಳನ್ನು ಯುವ ಪೀಳಿಗೆಗೆ ತಲುಪಿಸಲು ಸಾಧ್ಯವಾಗುತ್ತದೆ’ ಎಂದು ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಹೇಳಿದರು.

ನಗರದ ಸಾಹಿತ್ಯ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆ ಸಂಯುಕ್ತಾಶ್ರಯದಲ್ಲಿ ಸೋಮವಾರ ನಡೆದ ಛತ್ರಪತಿ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ,‘ಶಿವಾಜಿ ಮಹಾರಾಜರು ಸಣ್ಣ ವಯಸ್ಸಿನಲ್ಲಿ ಅಗಾಧ ಸಾಧನೆ ಮಾಡಿದವರು. ಅವರ ಆಡಳಿತಾತ್ಮಕ ಸುಧಾರಣೆಗಳು ಇಂದಿಗೂ ಪ್ರೇರಣಾದಾಯಕವಾಗಿವೆ’  ಎಂದರು.

ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ ಮಾತನಾಡಿ,‘ಶಿವಾಜಿಯವರು ಅಪ್ಪಟ ದೇಶಪ್ರೇಮಿ. ತಾಯಿ ಜೀಜಾಬಾಯಿಯ ಪ್ರೇರಣೆಯಿಂದ ಶಿವಾಜಿ ಮಹಾರಾಜರು ಸಂಸ್ಕಾರವಂತರಾಗಿ ಆದರ್ಶ ಜೀವನ ನಡೆಸಿದರು’ ಎಂದು ಸ್ಮರಿಸಿದರು.

ADVERTISEMENT

ಹೆಚ್ಚುವರಿ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರಸನ್ನ ಗಡಾದ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕರ್ಣಕುಮಾರ, ಸಮಾಜದ ಮುಖಂಡರಾದ ಮಾರುತಿ, ವಿಶ್ವನಾಥ, ಗವಿಸಿದ್ದಪ್ಪ, ಉಮೇಶ್ ಬಾಬು, ಪ್ರಭು ಕಿಡದಾಳ, ರಮೇಶ, ಸರೋಜಾ ಬಾಕಳೆ, ಮೈಲಾರಪ್ಪ, ಕೃಷ್ಣ, ಮಹಾಂತೇಶ ಸೇರಿದಂತೆ ಇತರರು ಇದ್ದರು.

Quote - ತಾಯಿ ಜೀಜಾಬಾಯಿ ಅವರು ಛತ್ರಪತಿ ಶಿವಾಜಿ ಅವರನ್ನು ತುಂಬಾ ಧೈರ್ಯ ಸಹನೆಯಿಂದ ಬೆಳೆಸಿದ್ದಾರೆ. ಭಾರತೀಯ ಸ್ತ್ರೀಯರ ಬಗ್ಗೆ ಶಿವಾಜಿ ಅವರಿಗೆ ಅಪಾರವಾದ ಗೌರವವಿತ್ತು. ಇಂದಿನ ಯುವ ಪೀಳಿಗೆ ಅವರ ಆದರ್ಶ ಅಳವಡಿಸಿಕೊಳ್ಳಬೇಕು ಉದಯಸಿಂಗ್ ಠಾಕೂರ ನಿವೃತ್ತ ಉಪನ್ಯಾಸಕ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.