ಸಾಂದರ್ಭಿಕ ಚಿತ್ರ
ಕೊಪ್ಪಳ: ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿ ಕುರಿತು ಸಮೀಕ್ಷಾ ಕಾರ್ಯಕ್ಕೆ ಆರಂಭದಲ್ಲಿ ಎದುರಾದ ಅನೇಕ ಅಡೆತಡೆಗಳನ್ನೂ ದಾಟಿರುವ ಜಿಲ್ಲಾಡಳಿತ ಭಾನುವಾರ ರಾತ್ರಿ ಅಂತ್ಯಕ್ಕೆ ಶೇ 96.06ರಷ್ಟು ಸಮೀಕ್ಷಾ ಕಾರ್ಯ ಪೂರ್ಣಗೊಳಿಸಿ ರಾಜ್ಯದಲ್ಲಿ ಮೊದಲ ಸ್ಥಾನದಲ್ಲಿದೆ.
ಒಟಿಪಿ ಬಾರದಿರುವುದು, ನೆಟ್‌ವರ್ಕ್ ಸಮಸ್ಯೆ, ಸರಿಯಾಗಿ ಮ್ಯಾಪಿಂಗ್ ಮಾಡದಿರುವುದು ಹೀಗೆ ಅನೇಕ ಸಮಸ್ಯೆಗಳು ಕಾಡಿದ್ದರಿಂದ ಸಮೀಕ್ಷೆ ಮಾಡಲು ಮನೆಮನೆಗೆ ತೆರಳಿರುವ ಸಿಬ್ಬಂದಿ ಆರಂಭದಲ್ಲಿ ಸಾಕಷ್ಟು ಸಂಕಷ್ಟ ಎದುರಿಸಿದ್ದರು.
ಜೆಸ್ಕಾಂ ಸಿಬ್ಬಂದಿ ನೆರವಿನಿಂದ ಜಿಲ್ಲೆಯಲ್ಲಿ ಒಟ್ಟು 3,21,980 ಮನೆಗಳಿಗೆ ಜಿಯೊ ಟ್ಯಾಗಿಂಗ್ ಮಾಡಲಾಗಿದ್ದು, ಮೂರು ಸಾವಿರಕ್ಕೂ ಅಧಿಕ ಸಿಬ್ಬಂದಿಯನ್ನು ಈ ಕೆಲಸಕ್ಕಾಗಿ ನಿಯೋಜನೆ ಮಾಡಲಾಗಿದೆ.
ಕಾರಟಗಿ, ಕನಕಗಿರಿ, ಯಲಬುರ್ಗಾ, ಕುಕನೂರು ತಾಲ್ಲೂಕುಗಳಲ್ಲಿ ಸಮೀಕ್ಷಾ ಕಾರ್ಯ ಶೇ 100ರಷ್ಟು ಪೂರ್ಣಗೊಂಡಿದ್ದು, ಕುಷ್ಟಗಿ ಮತ್ತು ಗಂಗಾವತಿ ತಾಲ್ಲೂಕಿನಲ್ಲಿ ಸೋಮವಾರ ಮುಗಿಯಲಿದೆ ಎಂದು ಜಿಲ್ಲಾಧಿಕಾರಿ ಸುರೇಶ ಇಟ್ನಾಳ ತಿಳಿಸಿದ್ದಾರೆ. ಕೊಪ್ಪಳ ತಾಲ್ಲೂಕು ವ್ಯಾಪ್ತಿಯಲ್ಲಿ ಸಣ್ಣಪುಟ್ಟ ಗೊಂದಲಗಳಾಗಿದ್ದು ತ್ವರಿತವಾಗಿ ಪರಿಹರಿಸಿ ಕಾಲಮಿತಿಯೊಳಗೆ ಮುಗಿಸಲಾಗುವುದು ಎಂದು ಅವರು ಹೇಳಿದರು. ಕೊಪ್ಪಳ ರಾಜ್ಯದಲ್ಲಿ ಪ್ರಥಮ ಸ್ಥಾನದಲ್ಲಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.