
ಕೊಪ್ಪಳ: ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರು ಹುತಾತ್ಮರಾದ ದಿನವಾದ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ಮತ್ತು ಕುಷ್ಠರೋಗ ನಿರ್ಮೂಲನಾಧಿಕಾರಿಗಳ ಕಾರ್ಯಾಲಯದ ವತಿಯಿಂದ ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮ ಜರುಗಿತು.
ಜಿಲ್ಲಾಡಳಿತ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಸುರೇಶ್ ಬಿ. ಇಟ್ನಾಳ ಅವರು ಮಾತನಾಡಿ ‘ಗ್ರಾಮೀಣ ಪ್ರದೇಶಗಳಿಗೆ ಅಧಿಕಾರಿಗಳು ಹೋಗಿ ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನ ಕುರಿತು ಜಾಗೃತಿ ಮೂಡಿಸಿ ಕುಷ್ಠರೋಗವನ್ನು ಪತ್ತೆಹಚ್ಚಿ ಚಿಕಿತ್ಸೆ ಕೊಡುವ ಕೆಲಸ ಮಾಡಬೇಕು. ಈ ರೋಗದ ತಪ್ಪು ಕಲ್ಪನೆಗಳನ್ನು ಜನರಲ್ಲಿ ಹೋಗಲಾಡಿಸಿ ತಾರತಮ್ಯವನ್ನು ಕೊನೆಗೊಳಿಸುವುದು, ಘನತೆಯನ್ನು ಕಾಪಾಡುವುದು' ಎಂಬ ಘೋಷವಾಕ್ಯವನ್ನು ಹೇಳಬೇಕು ಎಂದರು.
ಹೆಚ್ಚುವರಿ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಡಿಎಚ್‌ಒ ಡಾ. ಟಿ.ಲಿಂಗರಾಜು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೆಶಕ ಕರ್ಣಕುಮಾರ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.