ADVERTISEMENT

ಕೊಪ್ಪಳ ಜಿಲ್ಲಾ ಪಂಚಾಯಿತಿ ಸಿಇಒ ವರ್ಗಾವಣೆ

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2023, 16:38 IST
Last Updated 6 ಫೆಬ್ರುವರಿ 2023, 16:38 IST
ರಾಹುಲ್ ರತ್ನಂ ಪಾಂಡೆ
ರಾಹುಲ್ ರತ್ನಂ ಪಾಂಡೆ   

ಕೊಪ್ಪಳ: ಜಿಲ್ಲಾ ಪಂಚಾಯಿತಿ ಸಿಇಒ ಫೌಜಿಯಾ ಬಿ. ತರುನ್ನಮ್‌ ಅವರನ್ನು ಕೆಪಿಎಸ್‌ಸಿ ಪರೀಕ್ಷಾ ವಿಭಾಗದ ನಿಯಂತ್ರಕರನ್ನಾಗಿ ವರ್ಗಾವಣೆ ಮಾಡಿ ಸೋಮವಾರ ಸರ್ಕಾರ ಆದೇಶ ಹೊರಡಿಸಿದೆ.

ಕೃಷ್ಣಾ ಮೇಲ್ದಂಡೆ ಯೋಜನೆಯ ಪರಿಹಾರ, ಪುನರ್ವಸತಿ ಮತ್ತು ಭೂಸ್ವಾಧೀನದ ಪ್ರಧಾನ ವ್ಯವಸ್ಥಾಪಕ ರಾಹುಲ್ ರತ್ನಂ ಪಾಂಡೆ ಅವರನ್ನು ಕೊಪ್ಪಳ ಜಿಲ್ಲೆಯ ನೂತನ ಸಿಇಒ ಆಗಿ ನೇಮಕ ಮಾಡಲಾಗಿದೆ. ಫೌಜಿಯಾ ಒಂದೂವರೆ ವರ್ಷ ಇಲ್ಲಿ ಕರ್ತವ್ಯ ನಿರ್ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT