
ಕೊಪ್ಪಳ: ಜಿಲ್ಲಾ ಪಂಚಾಯಿತಿ ವತಿಯಿಂದ ಕರವಸೂಲಿ ಅಭಿಯಾನವನ್ನು ಫೆ. 8ರವರೆಗೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಹಮ್ಮಿಕೊಳ್ಳಬೇಕು ಎಂದು ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ತಿಳಿಸಿದ್ದಾರೆ.
ಶುಕ್ರವಾರ ಅಭಿಯಾನ ಆರಂಭವಾಗಿದ್ದು, 8ರ ವರೆಗೆ ಬೆಳಿಗ್ಗೆ 8ರಿಂದ ಸಂಜೆ 6 ಗಂಟೆ ತನಕ ಕರವಸೂಲಿ ಅಭಿಯಾನ ಹಮ್ಮಿಕೊಂಡು ತೆರಿಗೆ ವಸೂಲಾತಿಯಲ್ಲಿ ಶೇ. 100ರಷ್ಟು ಪ್ರಗತಿ ಸಾಧಿಸಬೇಕು ಎಂದು ಹೇಳಿದ್ದಾರೆ.
ಕರವಸೂಲಾತಿ ಆಂದೋಲನದ ಬಗ್ಗೆ ಪ್ರತಿ ಗ್ರಾಮದಲ್ಲಿ ಬ್ಯಾನರ್ ಅಳಡಿಸಿ ಪ್ರಚಾರ ಮಾಡಬೇಕು, ಗ್ರಾಮ ಪಂಚಾಯಿತಿಯಲ್ಲಿ ಬಾಕಿದಾರರ ಪಟ್ಟಿ ತಯಾರಿಸಿ ಮನೆಮನೆಗೆ ಭೇಟಿ ನೀಡಿ ಕರ ವಸೂಲಾತಿಗೆ ಕ್ರಮ ಕೈಗೊಂಡು ಶೇ. 100ರಷ್ಟು ಪ್ರಗತಿ ಸಾಧಿಸಬೇಕು. ಪತ್ರಿಕೆಗಳ ಮೂಲಕವು ಸಹ ಹೆಚ್ಚಿನ ಪ್ರಚಾರ ನೀಡಿ ಕರವಸೂಲಾತಿ ಆಂದೋಲನದ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂದಿದ್ದಾರೆ.
ಪ್ರತಿ ಎರಡು ಗಂಟೆಗೊಮ್ಮೆ ಕರವಸೂಲಾತಿ ಮಾಹಿತಿಯನ್ನು ತಾಲ್ಲೂಕು ಪಂಚಾಯತಿ ವಿಷಯ ನಿರ್ವಾಹಕರು ಸಂಗ್ರಹಿಸಿಕೊಂಡು ಈ ಮಾಹಿತಿ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.