
ತಾವರಗೇರಾ: ಸಮುದಾಯ ಆರೋಗ್ಯ ಕೇಂದ್ರದಲ್ಲಿ ವಿಠಲಾಪೂರ ಗ್ರಾಮದ ಲಕ್ಷ್ಮೀ ನೇಮಿನಾಥ (20) ಮೃತಪಟ್ಟ ಪರಿಣಾಮ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಕಾವೇರಿ ಶ್ಯಾವಿ ವಿರುದ್ಧ ಸ್ಥಳಿಯ ಪೊಲೀಸ್ ಠಾಣೆಯಲ್ಲಿ ಬುಧವಾರ ಪ್ರಕರಣದ ದೂರು ದಾಖಲಾಗಿದೆ.
ಮಹಿಳೆ ಮೃತಪಟ್ಟಿದ್ದರಿಂದ ಮಂಗಳವಾರ ರಾತ್ರಿ ಹಾಗೂ ಬುಧವಾರ ಬೆಳಿಗ್ಗೆ ಆಸ್ಪತ್ರೆ ಮುಂದೆ ಕುಟುಂಬಸ್ಥರು, ಸಾರ್ವಜನಿಕರು ಡಾ.ಕಾವೇರಿ ಶ್ಯಾವಿ ಅಮಾನತು ಮಾಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದರು.
ಸ್ಥಳೀಯ ಪೊಲೀಸ್ ಠಾಣೆಯ ಪಿಎಸ್‌ಐ ಸುಜಾತಾ ನಾಯಕ್, ಆರೋಗ್ಯ ಇಲಾಖೆಯ ತಾಲ್ಲೂಕು ಅಧಿಕಾರಿಗಳು, ವಿಠಲಾಪೂರ ಮತ್ತು ತಾವರಗೇರಾ ಪಟ್ಟಣದ ವಿವಿಧ ಸಂಘಟನೆಗಳ ಸದಸ್ಯರು, ಸಾರ್ವಜನಿಕರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.