ADVERTISEMENT

ಕೊಪ್ಪಳ: 12 ಜನ ಆಸ್ಪತ್ರೆಯಿಂದ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 5 ಜುಲೈ 2020, 12:03 IST
Last Updated 5 ಜುಲೈ 2020, 12:03 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕೊಪ್ಪಳ: ಜಿಲ್ಲೆಯಲ್ಲಿ ಭಾನುವಾರ 12 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ಜಿಲ್ಲಾ ಕೊವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರಲ್ಲಿ 12 ಜನರ ಋಣಾತ್ಮಕ ವರದಿ ಬಂದ ಹಿನ್ನಲೆಯಲ್ಲಿ ಭಾನುವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

ಜಿಲ್ಲೆಯ 108 ಜನ ಸೋಂಕಿತರಲ್ಲಿ 80 ಜನ ಗುಣಮುರಾಗಿದ್ದಾರೆ. ಅದರಲ್ಲಿ ಇಬ್ಬರು ಮೃತಪಟ್ಟಿದ್ದು, ಉಳಿದ 26 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಎಸ್.ಬಿ ದಾನರಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ಪೊಲೀಸ್‌ಗೆ ಕೊರೊನಾ ಸೋಂಕು. ನಗರ ಠಾಣೆ ಸಿಲ್ ಡೌನ್..!

ಜಿಲ್ಲಾ ಕೊವಿಡ್ ಅಸ್ಪತ್ರೆಯಲ್ಲಿ ಕೆಲಸ ನಿರ್ವಹಿಸಿದ ಪೊಲೀಸ್ ಗೆ ಭಾನುವಾರ ಕೊರೊನಾ ಸೋಂಕು ದೃಢಪಟ್ಟಿದ್ದು ನಗರ ಠಾಣೆಯನ್ನು ಸಿಲ್ ಡೌನ್ ಮಾಡಲಾಗಿದೆ.

ನಗರ ಠಾಣೆಯ 25 ವರ್ಷದ ಪೊಲೀಸ್ ಗೆ ಕಳೆದ 15 ದಿನಗಳಿಂದ ಜಿಲ್ಲಾ ಸರ್ಕಾರಿ ಕೊವಿಡ್ ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದನು. ಆದರೆ ಜೂ. 1 ರಂದು ಗಂಟಲು ದ್ರವ ತೆಗೆದು ಪರೀಕ್ಷೆಗೆ ಕಳುಹಿಸಲಾಗಿತ್ತು.

ಪರೀಕ್ಷೆಯ ವರದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಜೂ. 30 ರಂದು ನಗರ ಠಾಣೆಗೆ ಹಾಜರಾಗಿ ಆಗಿದ್ದರು. ಹಾಗಾಗಿ ನಗರ ಠಾಣೆ ಹಾಗೂ ಅವರು ವಾಸವಿರುವ ಬಿ.ಟಿ ಪಾಟೀಲ ಬಡಾವಣೆಯನ್ನು ಸಿಲ್ ಡೌನ್ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.