ಕೊಪ್ಪಳ: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿಗಳನ್ನು ಸಮರ್ಪಕವಾಗಿ ಜಾರಿಗೆ ತರಲು ಕೊಪ್ಪಳ ತಾಲ್ಲೂಕು ಮಟ್ಟದ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆ ಇಲ್ಲಿನ ಭಾಗ್ಯನಗರ ಪಟ್ಟಣ ಪಂಚಾಯಿತಿಯಲ್ಲಿ ಮಂಗಳವಾರ ನಡೆಯಿತು.
ಸಮಿತಿ ಅಧ್ಯಕ್ಷ ಬಾಲಚಂದ್ರನ್ ಎಸ್. ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ‘ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಬಿಡುಗಡೆಯಾಗುವ ಆಹಾರ ಧಾನ್ಯದ ಮಾಹಿತಿಯನ್ನು ಪಡಿತರ ಚೀಟಿದಾರರಿಗೆ ಹಾಗೂ ಗ್ಯಾರಂಟಿ ಸಮಿತಿ ಸದಸ್ಯರಿಗೆ ಮಾಹಿತಿ ನೀಡಬೇಕು’ ಎಂದು ಸೂಚನೆ ನೀಡಿದರು.
ಎಲ್ಲಾ ನ್ಯಾಯ ಬೆಲೆ ಅಂಗಡಿಗಳಲ್ಲಿ ಆಹಾರ ಸಂಗ್ರಹಣೆ, ವಿತರಣೆ ಮತ್ತು ಆಹಾರ ಧಾನ್ಯ ಉಳಿದಿರುವ ಮಾಹಿತಿಯುಳ್ಳ ನಾಮಫಲಕಗಳನ್ನು ಅಳವಡಿಸಿಲ್ಲವೆಂದು ಸದಸ್ಯರು ಸಭೆಯಲ್ಲಿ ತಿಳಿಸಿದಾಗ ಅಧ್ಯಕ್ಷರು ಕೂಡಲೇ ಅಳವಡಿಸಲು ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ತಾಲ್ಲೂಕು ಪಂಚಾಯಿತಿ ಇಒ ದುಂಡಪ್ಪ ತುರಾದಿ, ಭಾಗ್ಯನಗರ ಪಟ್ಟಣ ಪಂಚಾಯಿತಿ ಅಧ್ಯಕ್ಷ ತುಕಾರಾಮಪ್ಪ ಗಡಾದ, ಉಪಾಧ್ಯಕ್ಷ ಹೊನ್ನೂರಸಾಬ ಬೈರಾಪುರ, ಸ್ಥಾಯಿ ಸಮಿತಿ ಅಧ್ಯಕ್ಷ ಶಿವರಾಮ, ಸಮಿತಿ ಸದಸ್ಯರಾದ ದೇವರಾಜ ನಡುವಿನಮನಿ, ರಾಮಣ್ಣ ಚೌಡ್ಕಿ, ರಮೇಶ ಹ್ಯಾಟಿ, ಸವಿತಾ ಗೊರಂಟ್ಲಿ, ಅನ್ನದಾನಯ್ಯಸ್ವಾಮಿ, ಮೆಹಬೂಬಪಾಷಾ ಮಾನ್ವಿ, ಅನ್ವರ್ ಹುಸೇನ್ ಗಡಾದ, ಪರಶುರಾಮ ಕೊರವರ, ಧರ್ಮರಾಜರಾವ್, ಲಕ್ಷ್ಮಣ ಡೊಳ್ಳಿನ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.