ಕಾರಟಗಿ: ಪಟ್ಟಣದ ಜೆಪಿ ನಗರದ ಶ್ರೀದೇವಿ ದೇವಾಲಯದ ಹಿಂಭಾಗದಲ್ಲಿ ವಿದ್ಯುತ್ ಶಾರ್ಟ್ ಸರ್ಕಿಟ್‌ನಿಂದಾಗಿ ಭತ್ತದ ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಸುಟ್ಟು ಕರಕಲಾದ ಘಟನೆ ಭಾನುವಾರ ಜರುಗಿದೆ.
ಈ ಬಣವೆ ನವೀನ ರೆಡ್ಡಿ ಎಂಬುವವರಿಗೆ ಸೇರಿದೆ. 5 ಎಕರೆಯ ಭತ್ತದ ಹುಲ್ಲನ್ನು ಸಂಗ್ರಹಿಸಲಾಗಿತ್ತು ಎಂದು ಅಗ್ನಿಶಾಮಕ ಠಾಣೆಯ ಮೂಲಗಳು ತಿಳಿಸಿವೆ.
ಸುದ್ದಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.