ಕೊಪ್ಪಳ: ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತದಲ್ಲಿ (ಕೆಆರ್‌ಐಡಿಎಲ್) ನಡೆದಿದೆ ಎನ್ನಲಾದ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಶುಕ್ರವಾರವೂ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳನ್ನು ಶೋಧ ಮಾಡಿದರು.
ಸಂಸ್ಥೆಯಲ್ಲಿ ಹೊರಗುತ್ತಿಗೆಯಡಿ ಕಚೇರಿ ಸಹಾಯಕರಾಗಿ ಕೆಲಸ ಮಾಡಿದ್ದ ಕಳಕಪ್ಪ ನಿಡಗುಂದಿ ಅವರಿಗೆ ಸಂಬಂಧಿಸಿದ ಅಪಾರ ಆಸ್ತಿಯ ಪತ್ರಗಳನ್ನು ಗುರುವಾರ ವಶಕ್ಕೆ ಪಡೆದಿದ್ದರು. ಬೊಕ್ಕಸಕ್ಕೆ ₹72 ಕೋಟಿ ಸರ್ಕಾರಕ್ಕೆ ನಷ್ಟ ಉಂಟು ಮಾಡಲಾಗಿದೆ ಎನ್ನುವ ದೂರಿಗೆ ಸಂಬಂಧಿಸಿ ಎರಡನೇ ದಿನ ದಾಖಲೆಗಳನ್ನು ಶೋಧಿಸಿ 108 ಕಾಮಗಾರಿಗಳ ಅಂದಾಜು ಐದು ಸಾವಿರಕ್ಕೂ ಹೆಚ್ಚು ಪುಟಗಳ ದಾಖಲೆಗಳನ್ನು ಜಪ್ತಿ ಮಾಡಲಾಗಿದೆ.
‘ಕೆಲ ದಾಖಲೆಗಳನ್ನು ಬೆಂಗಳೂರಿಗೆ ಕಳುಹಿಸಲಾಗಿದೆ. ಪರಿಶೀಲನೆ ಪೂರ್ಣಗೊಂಡ ಬಳಿಕವಷ್ಟೇ ಆಸ್ತಿಯ ಒಟ್ಟು ಮೌಲ್ಯ ತಿಳಿಯಲಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.