ADVERTISEMENT

ಗಂಗಾವತಿ: ಕೃಷ್ಣದೇವರಾಯನ ಸಮಾಧಿ ಭಾಗಶಃ ಮುಳುಗಡೆ

​ಪ್ರಜಾವಾಣಿ ವಾರ್ತೆ
Published 4 ಜುಲೈ 2025, 14:06 IST
Last Updated 4 ಜುಲೈ 2025, 14:06 IST
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಆನೆಗೊಂದಿಯಲ್ಲಿರುವ ಕೃಷ್ಣದೇವರಾಯನ ಸಮಾಧಿ ಭಾಗಶಃ ಮುಳುಗಿರುವುದು
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಆನೆಗೊಂದಿಯಲ್ಲಿರುವ ಕೃಷ್ಣದೇವರಾಯನ ಸಮಾಧಿ ಭಾಗಶಃ ಮುಳುಗಿರುವುದು   

ಗಂಗಾವತಿ (ಕೊಪ್ಪಳ ಜಿಲ್ಲೆ): ತುಂಗಭದ್ರಾ ಜಲಾಶಯದಿಂದ ಶುಕ್ರವಾರ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿಸಿರುವುದರಿಂದ ತಾಲ್ಲೂಕಿನ ವಿರೂಪಾಪುರಗಡ್ಡೆ, ನವವೃಂದಾವನಗಡ್ಡೆ ರಸ್ತೆ ಸಂಪರ್ಕ ಕಡಿತವಾಗಿದೆ. ಆನೆಗೊಂದಿ ಭಾಗದ ಕೆಲ ದೇವಾಲಯ, ಮಂಟಪಗಳಿಗೆ ನೀರು ನುಗ್ಗಿದೆ.  ಜಲಾಶಯದ ಒಳಹರಿವು ಹೆಚ್ಚಿದ್ದು, ಹೆಚ್ಚುವರಿ ನೀರನ್ನು ನದಿಗೆ ಹರಿಸಲಾಗುತ್ತಿದೆ.

ಆನೆಗೊಂದಿಯಲ್ಲಿರುವ ಕೃಷ್ಣದೇವರಾಯ‌ನ ಸಮಾಧಿಯ 64 ಸಾಲಿನ ಕಲ್ಲಿನ ಮಂಟಪ ಭಾಗಶಃ ಮುಳುಗಡೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT