ಕೊಪ್ಪಳ: ಸಾರಿಗೆ ನೌಕರರ ಸಂಘಟನೆಗಳು ಮುಷ್ಕರಕ್ಕೆ ಕರೆ ಕೊಟ್ಟಿದ್ದರೂ ಕೆಲ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಿದ್ದರಿಂದ ಆಕ್ರೋಶಗೊಂಡ ಕಿಡಿಗೇಡಿಗಳು ಜಿಲ್ಲೆಯ ಕುಕನೂರು ಬಳಿ ಬಸ್‌ಗೆ ಕಲ್ಲು ತೂರಿದ್ದಾರೆ.
ಸೋಮವಾರ ರಾತ್ರಿ ಯಲಬುರ್ಗಾ ಡಿಪೊದ ಬಸ್ ಯಲಬುರ್ಗಾದಿಂದ ಬೆಂಗಳೂರಿಗೆ ತೆರಳುವಾಗ ಈ ಘಟನೆ ನಡೆದಿದೆ. ಕಲ್ಲು ತೂರಿದ್ದರಿಂದ ಬಸ್‌ನ ಮುಂಭಾಗದ ಗಾಜಿಗೆ ಹಾನಿಯಾಗಿದೆ.
ಇದರ ಬಗ್ಗೆ ಪ್ರಜಾವಾಣಿಗೆ ಪ್ರತಿಕ್ರಿಯಿಸಿದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಕೊಪ್ಪಳ ವಿಭಾಗೀಯ ನಿಯಂತ್ರಣಾಧಿಕಾರಿ ಆರ್.ಬಿ. ಜಾಧವ್ ’ಸೋಮವಾರ ರಾತ್ರಿ ಒಂದು ಬಸ್‌ಗೆ ಕಲ್ಲು ತೂರಲಾಗಿದೆ. ಇದನ್ನು ಹೊರತುಪಡಿಸಿ ಬೇರೆ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಬೇರೆ ನಿಗಮಗಳ ಬಸ್‌ಗಳು ಸಂಚರಿಸುತ್ತಿವೆ. ಜಿಲ್ಲೆಯಲ್ಲಿ 640 ಖಾಸಗಿ ವಾಹನಗಳು ಜಿಲ್ಲೆಯೊಳಗೆ ಮಾತ್ರ ಸಂಚರಿಸುತ್ತಿವೆ’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.