
ಕುಕನೂರು: ‘ದೇಹ ಮತ್ತು ಮನಸ್ಸಿನ ಸಂಯೋಗವೇ ಯೋಗ. ಭಾರತೀಯ ಯೋಗ ಪರಂಪರೆ ಇಂದು ವಿಶ್ವವ್ಯಾಪಿಯಾಗಿ ಬೆಳೆದಿದೆ’ ಎಂದು ಕೊಪ್ಪಳ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ಕೆ.ವಿ.ಪ್ರಸಾದ್ ಹೇಳಿದರು.
ತಾಲ್ಲೂಕಿನ ತಳಕಲ್ ಗ್ರಾಮದ ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಯೋಗಾಭ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.
ದಿನನಿತ್ಯ ಯೋಗ ಮಾಡಿದರೆ ನಮ್ಮ ಮಾನಸಿಕ ಒತ್ತಡ ಕಡಿಮೆ ಮಾಡಿಕೊಳಬಹುದು ಹಾಗೂ ಆತ್ಮಕ್ಕೆ ಸಮತೋಲನ ತರುವ ಪ್ರಕ್ರಿಯಲ್ಲಿ ಯೋಗ ಮಹತ್ವದಾಗಿದೆ ಎಂದರು.
ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು, ಉಪನ್ಯಾಸಕರು ಯೋಗಾಭ್ಯಾಸ ಮಾಡಿದರು.
ಯೋಗ ಉಪನ್ಯಾಸಕ ಶರಣಪ್ಪ ಮಣ್ಣೂರು, ಉಪನ್ಯಾಸಕ ಮಂಜುನಾಥ್, ವಿಶ್ವವಿದ್ಯಾಲಯದ ಆಡಳಿತಾಧಿಕಾರಿ ತಿಮ್ಮಾರೆಡ್ಡಿ ಮೇಟಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.