
ಕುಕನೂರು: ಪಟ್ಟಣ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಲೀಲಾವತಿ ಮುಧೋಳ್, ಉಪಾಧ್ಯಕ್ಷರಾಗಿ ಮಂಜುಳಾ ಕಲ್ಮನಿ ಆಯ್ಕೆಯಾದರು.
ತಹಶೀಲ್ದಾರ್ ಬಸವರಾಜ್ ಬೆಣ್ಣೆಶಿರೂರು ಅವರ ಸಮ್ಮುಖದಲ್ಲಿ ಪ್ರಕ್ರಿಯೆ ನಡೆಯಿತು. ತೆರವಾದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಒಟ್ಟು ನಾಲ್ಕು ಜನ ಸದಸ್ಯರು ನಾಮಪತ್ರ ಸಲ್ಲಿಕೆ ಮಾಡಿದ್ದರು. ಅದರಲ್ಲಿ ಕಾಂಗ್ರೆಸ್-ಬಿಜೆಪಿ ಪಕ್ಷದ ತಲಾ ಎರಡು ಜನ ಸದಸ್ಯರು ನಾಮಪತ್ರ ಸಲ್ಲಿಸಿದ್ದರು.
ಅಧ್ಯಕ್ಷರಾಗಿ ಆಯ್ಕೆಯಾದ ಲೀಲಾವತಿ ಮುಧೋಳ್ ಅವರಿಗೆ 12 ಮತಗಳು, ಉಪಾಧ್ಯಕ್ಷರಾಗಿ ಆಯ್ಕೆಯಾದ ಮಂಜುಳಾ ಕಲ್ಮನಿ ಅವರು 12 ಮತಗಳನ್ನು ಪಡೆದರು. ಪರಾಜಿತ ಅಭ್ಯರ್ಥಿ ಲಕ್ಷ್ಮಿ ಸಬರದ್ ಅವರಿಗೆ 9, ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ ನೇತ್ರಾವತಿ ಮಾಲಗತ್ತಿ ಅವರಿಗೆ 9 ಮತಗಳು ಪಡೆದುಕೊಂಡಿದ್ದಾರೆ.
ಶಾಸಕ ಬಸವರಾಜ ರಾಯರಡ್ಡಿ, ಸಂಸದ ರಾಜಶೇಖರ ಹಿಟ್ನಾಳ ಮತ ಚಲಾಯಿಸಿ, ಗೆದ್ದ ಅಭ್ಯರ್ಥಿಗಳಿಗೆ ಅಭಿನಂದನೆ ಸಲ್ಲಿಸಿದರು.
ಪಪಂ ಮುಖ್ಯಾಧಿಕಾರಿ ನಾಗೇಶ ಸೇರಿದಂತೆ ಕಂದಾಯ ಇಲಾಖೆ ಸಿಬ್ಬಂದಿಗಳು ಇದ್ದರು. ಪೊಲೀಸ್ ಬಂದೋಬಸ್ತ್ ನಲ್ಲಿ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.