ADVERTISEMENT

ಕುಕನೂರು ಪ.ಪಂ: ಅಧ್ಯಕ್ಷ ಸ್ಥಾನ ಬಿಜೆಪಿ ಪಾಲು

ಅಧ್ಯಕ್ಷರಾಗಿ ಶಂಭು ಜೋಳದ್ ಉಪಾಧ್ಯಕ್ಷರಾಗಿ ಗೀತಾ ಜಂಗ್ಲಿ ಆಯ್ಕೆ

​ಪ್ರಜಾವಾಣಿ ವಾರ್ತೆ
Published 3 ನವೆಂಬರ್ 2020, 12:39 IST
Last Updated 3 ನವೆಂಬರ್ 2020, 12:39 IST
ಕುಕನೂರಿನ ಪಟ್ಟಣ ಪಂಚಾಯಿತಿ ಅಧ್ಯಕ್ಷರಾಗಿ ಆಯ್ಕೆಯಾದ ಶಂಭು ಜೋಳದ ಅವರನ್ನು ಸನ್ಮಾನಿಸಲಾಯಿತು. ಶಾಸಕ ಹಾಲಪ್ಪ ಆಚಾರ್ ಹಾಗೂ ಸಂಸದ ಸಂಗಣ್ಣ ಕರಡಿ ಇದ್ದರು
ಕುಕನೂರಿನ ಪಟ್ಟಣ ಪಂಚಾಯಿತಿ ಅಧ್ಯಕ್ಷರಾಗಿ ಆಯ್ಕೆಯಾದ ಶಂಭು ಜೋಳದ ಅವರನ್ನು ಸನ್ಮಾನಿಸಲಾಯಿತು. ಶಾಸಕ ಹಾಲಪ್ಪ ಆಚಾರ್ ಹಾಗೂ ಸಂಸದ ಸಂಗಣ್ಣ ಕರಡಿ ಇದ್ದರು   

ಕುಕನೂರು: ಪಟ್ಟಣದ ಎಪಿಎಂಸಿಯಲ್ಲಿ ಮಂಗಳವಾರ ನಡೆದ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಶಂಭು ಜೋಳದ್ ಹಾಗೂ ಉಪಾಧ್ಯಕ್ಷರಾಗಿ ಗೀತಾ ಜಂಗ್ಲಿ ಆಯ್ಕೆಯಾಗಿದ್ದಾರೆ.

ಪಟ್ಟಣ ಪಂಚಾಯಿತಿಯ ಒಟ್ಟು 20 ಸದಸ್ಯ ಬಲದಲ್ಲಿ ಕಾಂಗ್ರೆಸ್‌ ಪಕ್ಷದ 09 ಸದಸ್ಯರು ಮತ್ತು ಬಿಜೆಪಿಯ 10 ಸದಸ್ಯರು ಇದ್ದರು.

ಬಿಜೆಪಿ ಪಕ್ಷದ ಮುಖಂಡರು ಕಾಂಗ್ರೆಸ್‌ ಸದಸ್ಯನನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ಧಾರೆ. ಆದ್ದರಿಂದ ಅಧಿಕಾರ ಬಿಜೆಪಿ ಪಾಲಾಗಿದೆ.

ADVERTISEMENT

ಬಿಜೆಪಿ ಪಕ್ಷದಿಂದ ಅಧ್ಯಕ್ಷ ಸ್ಥಾನಕ್ಕೆ ಶಂಭು ಜೋಳದ್ ಮತ್ತು ಕಾಂಗ್ರೆಸ್‌ ಪಕ್ಷದಿಂದ ರೆಹಮಾನ್ ಸಾಬ್ ಮಕ್ಕಪ್ಪನವರ ನಾಮಪತ್ರ ಸಲ್ಲಿಸಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ ಪಕ್ಷದಿಂದ ಗೀತಾ ಮಹಾತೇಂಶ ಜಂಗ್ಲಿ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಆದ್ದರಿಂದ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ಕಿರಣಕುಮಾರ್ ಕುಲಕರ್ಣಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.