ಸಾವು
(ಪ್ರಾತಿನಿಧಿಕ ಚಿತ್ರ)
ಕುಷ್ಟಗಿ: ತಾಲ್ಲೂಕಿನ ವಣಗೇರಾ ಸೀಮಾಂತರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಂಟೇನರ್ ಲಾರಿ ಡಿಕ್ಕಿಯಿಂದ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ.
ತಾಲ್ಲೂಕಿನ ಕೆ.ಬೋದೂರು ಗ್ರಾಮದ ಅಮರೇಶ ಗದ್ದೆಪ್ಪ ವಣಗೇರಿ (26) ಮೃತರು. ಗ್ರಾಮಕ್ಕೆ ಹೊರಟಿದ್ದ ಬೈಕ್‌ಗೆ ಡಿಕ್ಕಿ ಹೊಡೆದ ಲಾರಿ ಸುಮಾರು ಇಪ್ಪತ್ತು ಅಡಿವರೆಗೂ ಸವಾರನ ದೇಹವನ್ನು ಎಳೆದೊಯ್ದಿದ್ದು ಕಂಡುಬಂತು. ಘಟನೆ ನಂತರ ಲಾರಿ ಚಾಲಕ ಪರಾರಿಯಾಗಿದ್ದಾನೆ ಎಂದು ಮೂಲಗಳು ತಿಳಿಸಿವೆ.
ಲಾರಿ ಚಾಲಕ ಪಾನಮತ್ತನಾಗಿದ್ದ ಎಂದು ಸ್ಥಳದಲ್ಲಿದ್ದ ಪ್ರತ್ಯಕ್ಷದರ್ಶಿಗಳು ತಿಳಿಸಿದರು.
ಮೃತನ ತಂದೆ ಗದ್ದೆಪ್ಪ ನೀಡಿದ ದೂರಿನ ಅನ್ವಯ ಇಲ್ಲಿಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.