ADVERTISEMENT

ಕುಷ್ಟಗಿ: ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2025, 6:46 IST
Last Updated 5 ಸೆಪ್ಟೆಂಬರ್ 2025, 6:46 IST
ಕುಷ್ಟಗಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಪುರಸಭೆ ಅಧ್ಯಕ್ಷ ಮಹಾಂತೇಶ ಕಲಭಾವಿ ಉದ್ಘಾಟಿಸಿದರು
ಕುಷ್ಟಗಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಪುರಸಭೆ ಅಧ್ಯಕ್ಷ ಮಹಾಂತೇಶ ಕಲಭಾವಿ ಉದ್ಘಾಟಿಸಿದರು   

ಕುಷ್ಟಗಿ: ಪಟ್ಟಣದಲ್ಲಿ ಬುಧವಾರ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ ಆರಂಭಗೊಂಡಿತು.

ಕಾರ್ಯಕ್ರಮ ಉದ್ಘಾಟಿಸಿದ ಪುರಸಭೆ ಅಧ್ಯಕ್ಷ ಮಹಾಂತೇಶ ಕಲಭಾವಿ ಮಾತನಾಡಿ, ಕ್ರೀಡೆಗಳು ಮಾನವನ ಬದುಕಿನ ದೈಹಿಕ ಚಟುವಟಿಕೆಗಳ ಅವಿಭಾಜ್ಯ ಅಂಗವಾಗಿರುತ್ತದೆ. ಕ್ರೀಡೆಗಳಲ್ಲಿ ಹಲವಾರು ವಿಭಾಗಗಳಿದ್ದರೂ ದೈಹಿಕ, ಮಾನಸಿಕ ಬೆಳವಣಿಗೆಗೆ ಪೂರಕವಾಗಿರುತ್ತವೆ. ಯುವಕರು, ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದರು.

ದೈಹಿಕ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಮಹಾಂತೇಶ ಜಾಲಿಗಿಡದ ದಸರಾ ಕ್ರೀಡಾಕೂಟದ ಉದ್ದೇಶ, ಯುವಕರ ಭಾಗವಹಿಸುವಿಕೆಯ ಮಹತ್ವ ಕುರಿತು ವಿವರಿಸಿದರು.

ADVERTISEMENT

ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ನಾಗಪ್ಪ ಬಿಳಿಯಪ್ಪನವರ ಕ್ರೀಡಾ ಧ್ವಜಾರೋಹಣ ನೆರವೇರಿಸಿದರು. ಪುರಸಭೆ ವ್ಯವಸ್ಥಾಪಕ ಬಸವರಾಜ, ನೈರ್ಮಲ್ಯ ನಿರೀಕ್ಷಕ ಪ್ರಾಣೇಶ ಬಳ್ಳಾರಿ, ನೌಕರರ ಸಂಘದ ಜಿಲ್ಲಾ ಉಪಾಧ್ಯಕ್ಷ ಜಗದೀಶ ಸೂಡಿ, ಪ್ರೌಢಶಾಲೆ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ನಾಗರಾಜ್ ನಿಡಗುಂದಿ, ಪ್ರಾಥಮಿಕ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಹನೀಫ್ ಬಿಳೆಕುದರಿ, ಬಸವರಾಜ ಗುಡೂರು, ಗವಿಸಿದ್ದಪ್ಪ ನಾಗಲೀಕರ, ರಮೇಶ ಮೇಲಿನಮನಿ ಇದ್ದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸ್ವಾಮಿ ವಿವೇಕಾನಂದ ಕ್ರೀಡಾ ಸಂಸ್ಥೆ ವತಿಯಿಂದ ನಡೆದ ಕ್ರೀಡಾಕೂಟದಲ್ಲಿ ಅನೇಕ ಕ್ರೀಡಾಪಟುಗಳು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.