ಕುಷ್ಟಗಿ: ತಾಲ್ಲೂಕಿನ ಗ್ರಾಮವೊಂದರಲ್ಲಿ 17 ವರ್ಷದ ಬಾಲಕಿಯ ಮೇಲೆ ಗ್ರಾ.ಪಂ. ಕರವಸೂಲಿಗಾರನಾಗಿರುವ ಬೀರಪ್ಪ ಇಲಕಲ್ (27) ಎಂಬಾತ ಅತ್ಯಾಚಾರ ಎಸಗಿರುವ ಕುರಿತು ಬಾಲಕಿಯ ತಾಯಿ ಕುಷ್ಟಗಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಬಾಲಕಿಯನ್ನು ಹೊಲದಲ್ಲಿ ಬಲವಂತವಾಗಿ ಹೊತ್ತೊಯ್ದು ಹಲ್ಲೆ ನಡೆಸಿ ಅತ್ಯಾಚಾರ ಎಸಗಿದ್ದಾನೆ. ಈ ಕುರಿತು ಪೋಕ್ಸೊ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.