
ಅಳವಂಡಿ(ಕೊಪ್ಪಳ ಜಿಲ್ಲೆ): ಸಮೀಪದ ಕವಲೂರು ಗ್ರಾಮದಲ್ಲಿ ಮುಸ್ಲಿಂ ಕುಟುಂಬದ ಮನೆಯೊಂದರಲ್ಲಿ ದೀಪಾವಳಿ ಹಬ್ಬದಲ್ಲಿ ಲಕ್ಷ್ಮಿ ಪ್ರತಿಷ್ಠಾಪನೆ ಮಾಡಿ ವಿಶೇಷ ಪೂಜೆ ಸಲ್ಲಿಸಿದ್ದು, ಭಾವೈಕ್ಯತೆಗೆ ಸಾಕ್ಷಿಯಾಗಿದೆ.
ಕವಲೂರು ಗ್ರಾಮದ ಹುಸೇನಸಾಬ ವಾಲಿಕಾರ ಅವರ ಮನೆಯಲ್ಲಿ ದೀಪಾವಳಿ ಹಬ್ಬದ ನಿಮಿತ್ತ ಮಂಗಳವಾರ ತಳಿರು, ತೋರಣಗಳಿಂದ ಮನೆಯನ್ನು ಅಲಂಕರಿಸಿ ಲಕ್ಷ್ಮಿಯನ್ನು ಪೂಜಿಸಲಾಗಿದೆ.
‘ನಮ್ಮ ಮುಸ್ಲಿಂ ಧರ್ಮದ ಎಲ್ಲಾ ಹಬ್ಬಗಳನ್ನು ಆಚರಿಸುತ್ತೇವೆ. ಜೊತೆಗೆ ದೀಪಾವಳಿ ಹಬ್ಬದಲ್ಲಿ ಲಕ್ಷ್ಮಿ ಪ್ರತಿಷ್ಠಾಪನೆ ಮಾಡಿ, ಪೂಜೆ ನೇರವೇರಿಸುತ್ತಾ ಬಂದಿದ್ದೇವೆ. ಮನೆಗೆಲ್ಲ ವಿದ್ಯುತ್ ದೀಪಗಳನ್ನು ಅಳವಡಿಸಿ ತಳಿರು ತೋರಣಗಳನ್ನು ಕಟ್ಟಿದ್ದೇವೆ. ಲಕ್ಷ್ಮಿ ಪೂಜೆ ಸಲ್ಲಿಸಿ, ನೈವೇದ್ಯ ಸಮರ್ಪಿಸುತ್ತೇವೆ. ಹಬ್ಬದಲ್ಲಿ ಸ್ನೇಹಿತರನ್ನು ಆಹ್ವಾನಿಸಿ, ವಿಶೇಷ ಭೋಜನಾ ಕೂಟವನ್ನು ಏರ್ಪಡಿಸುತ್ತೇವೆ’ ಎಂದು ಹುಸೇನಸಾಬ ವಾಲಿಕಾರ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.