ADVERTISEMENT

ಸೇವಾಭದ್ರತೆಗೆ ಉಪನ್ಯಾಸಕರ ಆಗ್ರಹ

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2020, 6:28 IST
Last Updated 18 ಸೆಪ್ಟೆಂಬರ್ 2020, 6:28 IST
ಕೊಪ್ಪಳದಲ್ಲಿ ರಾಜ್ಯ ಅತಿಥಿ ಉಪನ್ಯಾಸಕರ ಹೋರಾಟ ಸಮಿತಿ ವತಿಯಿಂದ ಕೃಷಿ ಮತ್ತು ಉಸ್ತುವಾರಿ ಸಚಿವ ಸಚಿವ ಬಿ.ಸಿ.ಪಾಟೀಲ ಅವರಿಗೆ ಮನವಿ ಸಲ್ಲಿಸಲಾಯಿತು
ಕೊಪ್ಪಳದಲ್ಲಿ ರಾಜ್ಯ ಅತಿಥಿ ಉಪನ್ಯಾಸಕರ ಹೋರಾಟ ಸಮಿತಿ ವತಿಯಿಂದ ಕೃಷಿ ಮತ್ತು ಉಸ್ತುವಾರಿ ಸಚಿವ ಸಚಿವ ಬಿ.ಸಿ.ಪಾಟೀಲ ಅವರಿಗೆ ಮನವಿ ಸಲ್ಲಿಸಲಾಯಿತು   

ಕೊಪ್ಪಳ:ಅತಿಥಿ ಉಪನ್ಯಾಸಕರಿಗೆ ಸೇವಾಭದ್ರತೆ ಒದಗಿಸಬೇಕು ಎಂದು ಒತ್ತಾಯಿಸಿ ರಾಜ್ಯ ಅತಿಥಿ ಉಪನ್ಯಾಸಕರ ಹೋರಾಟ ಸಮಿತಿ ವತಿಯಿಂದ ಕೃಷಿ ಮತ್ತು ಉಸ್ತುವಾರಿ ಸಚಿವ ಸಚಿವ ಬಿ.ಸಿ.ಪಾಟೀಲ ಅವರಿಗೆ ಗುರುವಾರ ಮನವಿ ಸಲ್ಲಿಸಲಾಯಿತು.

ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಅಧಿವೇಶನದಲ್ಲಿ ಮಾತನಾಡಬೇಕು. ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಸಕಾರಾತ್ಮಕವಾಗಿ ಸ್ಪಂದಿಸಬೇಕು. ಪ್ರಮುಖವಾಗಿ ಉಪನ್ಯಾಸಕರಿಗೆ ಸೇವಾಭದ್ರತೆ ಒದಗಿಸಬೇಕು. ಯಾವುದೇ ಕಾರಣಕ್ಕೂ ಉಪನ್ಯಾಸಕರನ್ನು ಸೇವೆಯಿಂದ ತೆಗೆಯಬಾರದು ಎಂದು ಅವರು ಆಗ್ರಹಿಸಿದರು.

ಬಾಕಿ ಇರುವ ವೇತನವನ್ನು ಈ ಕೂಡಲೇ ಪಾವತಿಸಬೇಕು ಎಂದು ಮನವಿ ಮೂಲಕ ಒತ್ತಾಯಿಸಿದರು.

ADVERTISEMENT

ಸಮಿತಿಯ ಜಿಲ್ಲಾ ಸಂಚಾಲಕ ಶರಣಬಸವ ಪಾಟೀಲ್, ಸಂಯೋಜಕ ಶರಣು ಗಡ್ಡಿ, ಉಪನ್ಯಾಸಕರಾದ ಮಹಾಂತೇಶ್ ನೆಲಗಣಿ, ಕಲ್ಲಯ್ಯ ವಿ.ಪೂಜಾರ್, ಬಸವರಾಜ್‌ ಆರ್. ಹುಳಕಣ್ಣನವರ್, ಶಿವಪ್ರಸಾದ್ ಹಾದಿಮನಿ, ಗವಿಸಿದ್ದಯ್ಯ ಒಡೆಯರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.