ADVERTISEMENT

ಚಿರತೆ ದಾಳಿ : ವ್ಯಕ್ತಿಗೆ ಗಂಭೀರ ಗಾಯ

​ಪ್ರಜಾವಾಣಿ ವಾರ್ತೆ
Published 16 ನವೆಂಬರ್ 2022, 15:14 IST
Last Updated 16 ನವೆಂಬರ್ 2022, 15:14 IST
ಚಿರತೆ ದಾಳಿ ನಡೆಸಿದ ಪ್ರದೇಶಕ್ಕೆ ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಭೇಟಿ ನೀಡಿದರು
ಚಿರತೆ ದಾಳಿ ನಡೆಸಿದ ಪ್ರದೇಶಕ್ಕೆ ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಭೇಟಿ ನೀಡಿದರು   

ಕೊಪ್ಪಳ: ತಾಲ್ಲೂಕಿನ ಹನುಮನಹಳ್ಳಿ ಸಮೀಪದಲ್ಲಿ ಚಿರತೆ ದಾಳಿಗೆ ಹನುಮನಹಳ್ಳಿ ಗ್ರಾಮದ ಷಣ್ಮುಖಪ್ಪ ಬಡಿಗೇರ್ ಎಂಬಾತನಿಗೆ ಕತ್ತಿಗೆ ಗಾಯವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಮಂಗಳವಾರ ಸಂಜೆ ಗ್ರಾಮದ ಹೊರವಲಯದಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಸ್ಥಳೀಯರ ಮಾಹಿತಿ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ಸೆರೆ ಹಿಡಿಯಲು ಬೋನಿನೊಂದಿಗೆ ಸ್ಥಳಕ್ಕೆ ಭೇಟಿ ನೀಡಿದ್ದರು. ಈ ಪ್ರಯತ್ನ ನಡೆದಿರುವಾಗ ಚಿರತೆ ಗಾಬರಿಗೊಂಡು ಓಡಿ ಹೋಗಿದೆ. ಆಗ, ಮರದ ಅಡಿಯಲ್ಲಿ ಕುಳಿತಿದ್ದ ವ್ಯಕ್ತಿ ಮೇಲೆ ದಾಳಿ ನಡೆಸಿದೆ. ತಕ್ಷಣ ಅರಣ್ಯ ಇಲಾಖೆ, ಪೊಲೀಸ್ ಸಿಬ್ಬಂದಿ ವ್ಯಕ್ತಿಯನ್ನು ರಕ್ಷಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.

ಉಪ ವಲಯ ಅರಣ್ಯಾಧಿಕಾರಿ ಅಂದಪ್ಪ ಕುರಿ ‘ಚಿರತೆ ಹಿಡಿಯುವ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ. ತಕ್ಷಣ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಹೇಳಿದರು.

ADVERTISEMENT

ಸ್ಥಳಕ್ಕೆ ಶಾಸಕ ರಾಘವೇಂದ್ರ ಹಿಟ್ನಾಳ್ ಭೇಟಿ ನೀಡಿ ಅರಣ್ಯ ಇಲಾಖೆ ಹಾಗೂ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.