ADVERTISEMENT

ಆನೆಗೊಂದಿ: ಬೋನಿಗೆ ಬಿದ್ದ ಚಿರತೆ

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2025, 15:27 IST
Last Updated 9 ಏಪ್ರಿಲ್ 2025, 15:27 IST
ಗಂಗಾವತಿ ತಾಲ್ಲೂಕಿನ ಆನೆಗೊಂದಿ ಗ್ರಾಮದ ತಳವಾರ ಘಟ್ಟದ ಬಳಿನ ಗುಂಪು‌ ಮನೆಗಳ ಬಳಿ ಇರಿಸಿದ್ದ ಬೋನಿಗೆ ಚಿರತೆ ಬಿದ್ದಿರುವುದು.
ಗಂಗಾವತಿ ತಾಲ್ಲೂಕಿನ ಆನೆಗೊಂದಿ ಗ್ರಾಮದ ತಳವಾರ ಘಟ್ಟದ ಬಳಿನ ಗುಂಪು‌ ಮನೆಗಳ ಬಳಿ ಇರಿಸಿದ್ದ ಬೋನಿಗೆ ಚಿರತೆ ಬಿದ್ದಿರುವುದು.   

ಗಂಗಾವತಿ: ತಾಲ್ಲೂಕಿನ ಆನೆಗೊಂದಿ ಗ್ರಾಮದ ತಳವಾರಗಟ್ಟದ ಸಮೀಪ ಗುಂಪು ಮನೆಗಳ ಬಳಿ ಕಾಣಿಸಿಕೊಂಡು ಜನರಿಗೆ ಆತಂಕ ಮೂಡಿಸಿದ್ದ ಚಿರತೆಯು ಮಂಗಳವಾರ ರಾತ್ರಿ ಬೋನಿಗೆ ಬಿದ್ದಿದೆ.

ಗುಂಪು ಮನೆಗಳ ಬಳಿ ಚಿರತೆ ಕಾಣಿಸಿಕೊಂಡಿದ್ದರಿಂದ ಭಯಭೀತರಾದ ನಿವಾಸಿಗಳು ಗ್ರಾಮ ಪಂಚಾಯಿತಿಗೆ ಮಾಹಿತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಆನೆಗೊಂದಿ ಪಿಡಿಒ ಅವರು ಚಿರತೆ ಸೆರೆಗೆ ಕ್ರಮ ಕೈಗೊಳ್ಳುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕೆಲ ದಿನಗಳ ಹಿಂದೆ ಬೋನು ಇರಿಸಲಾಗಿತ್ತು.

‘ಸೆರೆಸಿಕ್ಕ ನಾಲ್ಕು ವರ್ಷದ ಗಂಡು ಚಿರತೆಯನ್ನು ಮೇಲಧಿಕಾರಿಗಳ ಸೂಚನೆಯಂತೆ ಸುರಕ್ಷಿತ ಸ್ಥಳಕ್ಕೆ ಬಿಡಲಾಗಿದೆ’ ಎಂದು ಅರಣ್ಯ ಇಲಾಖೆ ಅಧಿಕಾರಿ ಸುಭಾಷ ಚಂದ್ರ ನಾಯಕ ತಿಳಿಸಿದ್ದಾರೆ.

ADVERTISEMENT
ಗಂಗಾವತಿ ತಾಲ್ಲೂಕಿನ ಆನೆಗೊಂದಿ ಗ್ರಾಮದ ತಳವಾರ ಘಟ್ಟದ ಬಳಿ ಇರಿಸಿದ್ದ ಬೋನಿಗೆ ಬಿದ್ದ ಚಿರತೆ 
ಗಂಗಾವತಿ ತಾಲ್ಲೂಕಿನ ಆನೆಗೊಂದಿ ಗ್ರಾಮದ ತಳವಾರ ಘಟ್ಟದ ಬಳಿನ ಗುಂಪು‌ ಮನೆಗಳ ಬಳಿ ಇರಿಸಿದ್ದ ಬೋನಿಗೆ ಚಿರತೆ ಬಿದ್ದಿರುವುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.