ತಾವರಗೇರಾ: ಸಮೀಪದ ಗುಡ್ಡದಲ್ಲಿ ಕಾಣಿಸಿಕೊಳ್ಳುತ್ತಿದ್ದ ಹೆಣ್ಣು ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.
ತಾವರಗೇರಾ ಸಮೀಪದ ಕನ್ನಾಳ, ಪುರ, ಮೆಣೆದಾಳ ಸುತ್ತಲಿನ ಅರಣ್ಯ ಪ್ರದೇಶದಲ್ಲಿ ಕಾಣಿಸಿಕೊಳ್ಳುತ್ತಿದ್ದ ಈ ಚಿರತೆ ಶನಿವಾರ ಸಂಜೆ ಬೋನಿಗೆ ಬಿದ್ದಿದೆ.
ರೈತರಾದ ಸಂತೋಷ ಸರನಾಡಗೌಡರ ಮತ್ತು ಸ್ಥಳೀಯರ ಸಹಕಾರದಿಂದ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಹಿಡಿಯಲು ಬೋನು ಅಳವಡಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.