ADVERTISEMENT

ಆನೆಗೊಂದಿ: ಬೋನಿಗೆ ಬಿದ್ದ ಚಿರತೆ

​ಪ್ರಜಾವಾಣಿ ವಾರ್ತೆ
Published 19 ಜನವರಿ 2021, 1:50 IST
Last Updated 19 ಜನವರಿ 2021, 1:50 IST
ಗಂಗಾವತಿ ತಾಲ್ಲೂಕಿನ ಆನೆಗೊಂದಿಯ ದುರ್ಗಾದೇವಿ ಬೆಟ್ಟದಲ್ಲಿ ಚಿರತೆ ಬೋನಿಗೆ ಬಿದ್ದಿದೆ
ಗಂಗಾವತಿ ತಾಲ್ಲೂಕಿನ ಆನೆಗೊಂದಿಯ ದುರ್ಗಾದೇವಿ ಬೆಟ್ಟದಲ್ಲಿ ಚಿರತೆ ಬೋನಿಗೆ ಬಿದ್ದಿದೆ   

ಗಂಗಾವತಿ: ತಾಲ್ಲೂಕಿನ ಆನೆಗೊಂದಿಯ ಆದಿಶಕ್ತಿ ದುರ್ಗಾದೇವಿ ದೇವಸ್ಥಾನದ ಸಮೀಪ ಅರಣ್ಯ ಇಲಾಖೆಯವರು ಇಟ್ಟಿದ್ದ ಬೋನಿಗೆ 6 ವರ್ಷದ ಗಂಡು ಚಿರತೆಯೊಂದು ಸೋಮವಾರ ಬಿದ್ದಿದೆ.

ಕಳೆದ ಮೂರ್ನಾಲ್ಕು ತಿಂಗಳಿಂದ ಆನೆಗೊಂದಿ ಭಾಗದಲ್ಲಿ ಚಿರತೆ ಹಾವಳಿ ಹೆಚ್ಚಾಗಿತ್ತು. ಇಬ್ಬರು ಯುವಕರು ಬಲಿಯಾಗಿದ್ದರು. ಚಿರತೆ ಸೆರೆಗೆ ಅರಣ್ಯ ಇಲಾಖೆಯವರು ಸಾಕಷ್ಟು ಶ್ರಮ ವಹಿಸಿದ್ದರು. ಒಂದು ತಿಂಗಳ ನಂತರದಲ್ಲಿ ಚಿರತೆ ಬೋನಿಗೆ ಬಿದ್ದಿದೆ.

ಜಿಲ್ಲಾ ಅರಣ್ಯಾಧಿಕಾರಿ ಹರ್ಷಾಭಾನು ಮಾತನಾಡಿ,‘ನರಭಕ್ಷಕ ಚಿರತೆ ಎಂದು ಗುರುತಿಸಬೇಕಾದರೆ ವಿವಿಧ ನಿಯಮ ಪಾಲನೆ ಮಾಡಬೇಕು. ಚಿರತೆಯ ಉಗುರಿನ ಗುರುತು ಹಾಗೂ ಕೂದಲಿನ ಡಿಎನ್‍ಎ ಸಂಗ್ರಹಿಸಿ ವರದಿ ಬಂದ ಬಳಿಕ ತಿಳಿಸುತ್ತೇವೆ. ಚಿರತೆಗೆ ಅರವಳಿಕೆ ನೀಡಿ, ಕಮಲಾಪುರದ ಅಟಲ್‌ ಬಿಹಾರಿ ವಾಜಪೇಯಿ ಪಾರ್ಕ್‌ಗೆ ಬಿಟ್ಟು ಬರಲಾಗುತ್ತದೆ. ಅಲ್ಲಿ ಸೂಕ್ಷ್ಮವಾಗಿ ಪರಿಶೀಲನೆ ನಡೆಸಿ, ಖಾತರಿ ಪಡಿಸಲಾಗುವುದು. ಜನರು ಅರಣ್ಯ ಪ್ರದೇಶದಲ್ಲಿ ಒಂಟಿಯಾಗಿ ತಿರುಗಾಡದೆ. ಗುಂಪು ಗುಂಪಾಗಿ ತಿರುಗಾಡಬೇಕು’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.