ADVERTISEMENT

ಫಲಿತಾಂಶ ಹೆಚ್ಚಳಕ್ಕೆ ಶ್ರಮಿಸೋಣ: ಎಸ್.ಉಮೇಶ

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2022, 5:20 IST
Last Updated 20 ಸೆಪ್ಟೆಂಬರ್ 2022, 5:20 IST
ಕೊಪ್ಪಳದ ಭಾಗ್ಯನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯ ನೂತನ ಉಪನಿರ್ದೇಶಕ ಎಸ್.ಉಮೇಶ ಅವರನ್ನು ಸನ್ಮಾನಿಸಲಾಯಿತು
ಕೊಪ್ಪಳದ ಭಾಗ್ಯನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯ ನೂತನ ಉಪನಿರ್ದೇಶಕ ಎಸ್.ಉಮೇಶ ಅವರನ್ನು ಸನ್ಮಾನಿಸಲಾಯಿತು   

ಕೊಪ್ಪಳ: ‘ಉಪನಿರ್ದೇಶಕರು, ಪ್ರಾಚಾರ್ಯರು, ಉಪನ್ಯಾಸಕರು ಎಲ್ಲರೂ ಸೇರಿ ಈ ವರ್ಷದ ಪಿ.ಯು.ಸಿ. ದ್ವಿತೀಯ ವಿದ್ಯಾರ್ಥಿಗಳ ಫಲಿತಾಂಶ ಹೆಚ್ಚಳಕ್ಕೆ ಪ್ರಾಮಾಣಿಕವಾಗಿ ಪ್ರಯತ್ನಿಸೋಣ’ ಎಂದು ಕೊಪ್ಪಳದ ಪದವಿಪೂರ್ವ ಶಿಕ್ಷಣ ಇಲಾಖೆಯ ನೂತನ ಉಪನಿರ್ದೇಶಕ ಎಸ್.ಉಮೇಶ ಹೇಳಿದರು.

ಇಲ್ಲಿಗೆ ಸಮೀಪದ ಭಾಗ್ಯನಗರದ ಸರ್ಕಾರಿ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ ‘ನನ್ನ ಅಧಿಕಾರದ ಅವಧಿಯಲ್ಲಿ ಸಾಕಷ್ಟು ಯೋಜನೆಗಳನ್ನು ಹಾಕಿಕೊಂಡಿದ್ದೇನೆ. ಶೀಘ್ರದಲ್ಲಿಯೇ ಎಲ್ಲ ಉಪನ್ಯಾಸಕರಿಗೆ ಜಿಲ್ಲಾಮಟ್ಟದ ವಿಷಯವಾರು ಕಾರ್ಯಗಾರಗಳನ್ನು ಹಮ್ಮಿಕೊಳ್ಳಲಾಗುವುದು’ ಎಂದರು.

ಜಿಲ್ಲಾಧ್ಯಕ್ಷ ಅನಿಲಕುಮಾರ, ಮಹಾವಿದ್ಯಾಲಯದ ಪ್ರಾಚಾರ್ಯ ರಾಜಶೇಖರ ಪಾಟೀಲ, ಶಾಖಾಧಿಕಾರಿಯಾಗಿ ಎಂ ರಮೇಶ, ಉಪನ್ಯಾಸಕರಾದ ಹನುಮಂತಾಚಾರ್ಯ ಅಂಜಕ್ಕಿ, ಬಸವರಾಜ ವಸ್ತ್ರದ, ಪ್ರಾಚಾರ್ಯರಾದ ಜಿ.ಎಂ.ಭೂಸನೂರಮಠ, ಟಿ.ಸಿ. ಶಾಂತಪ್ಪ, ಬಸಪ್ಪ ನಾಗೋಲಿ, ಹನುಮಂತಪ್ಪ ಅಂಡಗಿ ಚಿಲವಾಡಗಿ, ಸುಧೀಂದ್ರರಾವ್ ಕುಲಕರ್ಣಿ, ಡಾ. ಪಕೀರಪ್ಪ ವಜ್ರಬಂಡಿ, ಉಪನ್ಯಾಸಕರ ಸಂಘದ ಕಾರ್ಯಾಧ್ಯಕ್ಷ ಮಾರುತಿ ಲಕಮಾಪೂರ ಸೇರಿದಂತೆ ಅನೇಕರು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.