ADVERTISEMENT

ಕುಷ್ಟಗಿ: ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

ಜನೌಷಧ ಕೇಂದ್ರ ಸ್ಥಗಿತಕ್ಕೆ ಸರ್ಕಾರದ ಆದೇಶ

​ಪ್ರಜಾವಾಣಿ ವಾರ್ತೆ
Published 30 ಮೇ 2025, 15:44 IST
Last Updated 30 ಮೇ 2025, 15:44 IST
ಕುಷ್ಟಗಿ ಸರ್ಕಾರಿ ಆಸ್ಪತ್ರೆ ಬಳಿ ಬಿಜೆಪಿ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು
ಕುಷ್ಟಗಿ ಸರ್ಕಾರಿ ಆಸ್ಪತ್ರೆ ಬಳಿ ಬಿಜೆಪಿ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು   

ಕುಷ್ಟಗಿ: ಸರ್ಕಾರಿ ಆಸ್ಪತ್ರೆಗಳಲ್ಲಿದ್ದ ಜನೌಷಧ ಕೇಂದ್ರಗಳನ್ನು ಸ್ಥಗಿತಗೊಳಿಸಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.

ತಾಲ್ಲೂಕು ಘಟಕದ ಅಧ್ಯಕ್ಷ ಮಹಾಂತೇಶ ಬದಾಮಿ, ಯುವ ಮೋರ್ಚಾ ಅಧ್ಯಕ್ಷ ಉಮೇಶ ಯಾದವ ನೇತೃತ್ವದಲ್ಲಿ ಇಲ್ಲಿಯ ಸಾರ್ವಜನಿಕ ಆಸ್ಪತ್ರೆ ಬಳಿ ಜಮಾಯಿಸಿದ ಪಕ್ಷದ ಕಾರ್ಯಕರ್ತರು, ಮುಖಂಡರು ಕಾಂಗ್ರೆಸ್‌ ಪಕ್ಷದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರಮುಖರು, ‘ಕೇಂದ್ರದ ನರೇಂದ್ರ ಮೋದಿ ಅವರನ್ನು ವಿರೋಧಿಸುವ ಒಂದೇ ಕಾರಣಕ್ಕೆ ಕಾಂಗ್ರೆಸ್‌ ಬಡವರಿಗೆ, ದೀನ ದಲಿತರಿಗೆ ಕಡಿಮೆ ಬೆಲೆಯಲ್ಲಿ ಗುಣಮಟ್ಟದ ಔಷಧ ಕೇಂದ್ರಗಳನ್ನೇ ಮುಚ್ಚಿರುವುದು ಬಡವರಿಗೆ ಮಾಡಿದ ದ್ರೋಹವಲ್ಲದೆ ಬೇರೆ ಏನೂ ಅಲ್ಲ. ಖಾಸಗಿ ಔಷಧ ಮಾರಾಟಗಾರರ ಲಾಬಿಗೆ ಮಣಿದಿರುವ ಕಾಂಗ್ರೆಸ್‌ ಸರ್ಕಾರ ಜನೌಷಧ ಕೇಂದ್ರಗಳನ್ನು ಮುಚ್ಚಿಸಿರುವುದು ಸ್ಪಷ್ಟ. ಬಡವರ ಬಗ್ಗೆ ಕಾಂಗ್ರೆಸ್‌ ಪಕ್ಷಕ್ಕೆ ಇರುವ ಕಾಳಜಿ ಎಂಥದ್ದು ಎಂಬುದು ಇದರಿಂದಲೇ ತಿಳಿಯುತ್ತದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ಲಾಡ್‌ಸಾಬ್ ಕೊಳ್ಳಿ, ಸುಪ್ರೀತ್, ಸುಕುಮುನಿ ಕೊರಡಕೇರಿ, ವಿಜಯ ದೇಸಾಯಿ, ಕುಬೇರ ಬನ್ನಿಗೋಳ, ದ್ಯಾಮಣ್ಣ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.