ಯಲಬುರ್ಗಾ: ತಾಲ್ಲೂಕಿನ ವಣಗೇರಿ ಗ್ರಾಮದ ರಸ್ತೆಬದಿಯಲ್ಲಿ ಇರುವ ವಿದ್ಯುತ್ ಪರಿವರ್ತಕದಿಂದ ವಿದ್ಯುತ್ ಪ್ರಸರಣಗೊಂಡ ಪರಿಣಾಮ ಸ್ಥಳದಲ್ಲಿಯೇ ಎತ್ತು ಹಾಗೂ ಕುರಿಗಳು ಮೃತಪಟ್ಟಿರುವ ಘಟನೆ ಶುಕ್ರವಾರ ಬೆಳಿಗ್ಗೆ ಜರುಗಿದೆ.
ಗ್ರಾಮದ ರೈತ ಬಸಪ್ಪ ಭಜಂತ್ರಿ ಅವರಿಗೆ ಸೇರಿದ್ದ ಒಂದು ಹಸು, ಎರಡು ಆಡು, ಒಂದು ಕುರಿ ಸೇರಿ ಒಟ್ಟು ನಾಲ್ಕು ಜಾನುವಾರುಗಳು ಸತ್ತಿವೆ. ಜಿಟಿ ಜಿಟಿ ಮಳೆ ಸುರಿಯುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದ್ದು, ರೈತ ಬಸಪ್ಪ ಅವರಿಗೆ ಅಪಾರ ನಷ್ಟವಾಗಿದೆ. ಘಟನಾ ಸ್ಥಳಕ್ಕೆ ಜೆಸ್ಕಾಂ ಸಿಬ್ಬಂದಿ ಭೇಟಿ ನೀಡಿದ್ದಾರೆ.
ಒತ್ತಾಯ: ವಿದ್ಯುತ್ ಪರಿವರ್ತಕ ಪ್ರದೇಶದಲ್ಲಿ ರಕ್ಷಣೆ ಗೋಡೆ ಅಥವಾ ತಂತಿ ಜಾಲರಿಗಳನ್ನು ಅಳವಡಿಸುವ ಬಗ್ಗೆ ಅಧಿಕಾರಿಗಳು ಕಾಳಜಿವಹಿಸಬೇಕಿತ್ತು. ಮಳೆ ಗಾಳಿಗೆ ವಿದ್ಯುತ್ ತಂತಿಗಳು ಸಡಿಲಗೊಂಡಿರುತ್ತವೆ, ಅಲ್ಲದೇ ತುಂಡಾಗಿ ಬಿದ್ದಿರುತ್ತವೆ. ಇಂತಹ ಸನ್ನಿವೇಶಗಳ ಬಗ್ಗೆ ಜೆಸ್ಕಾಂ ಎಚ್ಚರವಹಿಸುವುದು ಅಗತ್ಯವಿದೆ. ನಷ್ಟಕ್ಕೆ ಒಳಗಾದ ರೈತರಿಗೆ ತ್ವರಿತವಾಗಿ ಸೂಕ್ತ ಪರಿಹಾರ ನೀಡುವ ಬಗ್ಗೆ ಸರ್ಕಾರ ಕಾಳಜಿ ತೋರಬೇಕು ಎಂದು ಜೆಡಿಎಸ್ ಮುಖಂಡ ಮಲ್ಲನಗೌಡ ಕೋನನಗೌಡ್ರ ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.