ADVERTISEMENT

ಕೊಪ್ಪಳ: ಕೃಷಿ ಇಲಾಖೆ ಉಪ ನಿರ್ದೇಶಕರ ಮನೆ ಮೇಲೆ ಲೋಕಾಯುಕ್ತ ದಾಳಿ

​ಪ್ರಜಾವಾಣಿ ವಾರ್ತೆ
Published 28 ಮಾರ್ಚ್ 2024, 6:20 IST
Last Updated 28 ಮಾರ್ಚ್ 2024, 6:20 IST
   

ಕೊಪ್ಪಳ: ಕೊಪ್ಪಳದ ಕೃಷಿ ಇಲಾಖೆಯ ಉಪ ನಿರ್ದೇಶಕ ಸಹದೇವ ಯರಗುಪ್ಪ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಇಂದು (ಗುರುವಾರ) ದಾಳಿ ನಡೆಸಿದ್ದಾರೆ.

ಎರಡು ವರ್ಷಗಳಿಂದ ಇಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಹದೇವ ಅವರ ಕೊಪ್ಪಳದ ಬಿ.ಟಿ. ಪಾಟೀಲ್ ನಗರದಲ್ಲಿರುವ ಮನೆ, ಜಿಲ್ಲಾಡಳಿತ ಭವನದಲ್ಲಿರುವ ಕೃಷಿ ಇಲಾಖೆ ಕಚೇರಿ ಮೇಲೆ ದಾಳಿ ನಡೆದಿದೆ.

ಸಹದೇವ ಮೂಲತಃ ಗದುಗಿನವರು.

ADVERTISEMENT

ಗದಗದ ನಿವಾಸದ ಮೇಲೂ ದಾಳಿ ನಡೆದಿದ್ದು ಗದಗಿನ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.