ಕರ್ನಾಟಕ ಲೋಕಾಯುಕ್ತ
ಕೊಪ್ಪಳ: ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತದ ಇಲ್ಲಿನ ಮಾಜಿ ಹೊರಗುತ್ತಿಗೆ ನೌಕರ ಕಳಕಪ್ಪ ಅವರ ನಗರದ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಇಲ್ಲಿನ ಪ್ರಗತಿ ನಗರದಲ್ಲಿರುವ ಮನೆ ಮೇಲೆ ದಾಳಿ ನಡೆಸಿದ್ದಾರೆ. ಕಳಕಪ್ಪ ಅಕ್ರಮಗಳ ವಿರುದ್ದ ಕಳೆದ ವಾರ ಅದೇ ಇಲಾಖೆಯ ಕೆಲವರು ದೂರು ಕೊಟ್ಟಿದ್ದರು.
ಚರಂಡಿ ಹಾಗೂ ಕುಡಿಯುವ ನೀರು ಕಾಮಗಾರಿಯಲ್ಲಿ ವ್ಯಾಪಕ ಅಕ್ರಮವಾಗಿದೆ ಎಂದು ದೂರು ನೀಡಲಾಗಿತ್ತು ಎಂದು ಮೂಲಗಳು ತಿಳಿಸಿವೆ.
ಕಳೆದ ಕೆಲ ದಿನಗಳ ಹಿಂದೆ ಹೊರಗುತ್ತಿಗೆ ಕೆಲಸದಿಂದ ತೆಗೆದು ಹಾಕಲಾಗಿತ್ತು. ಸದ್ಯಕ್ಕೆ ಲಭ್ಯವಾಗಿರುವ ದಾಖಲೆಗಳ ಪ್ರಕಾರ ಕಳಕಪ್ಪ ಬಳಿ 20 ಹೆಚ್ಚು ನಿವೇಶನ ಹಾಗೂ ಮನೆಗಳ ದಾಖಲೆಗಳು ಲಭ್ಯವಾಗಿವೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.