
ಪ್ರಜಾವಾಣಿ ವಾರ್ತೆ
ಕೊಪ್ಪಳ ಕಿಮ್ಸ್ ಆಡಳಿತಾಧಿಕಾರಿ ಬಿ. ಕಲ್ಲೇಶ ಮನೆ ಮೇಲೆ ಲೋಕಾಯುಕ್ತರ ದಾಳಿ
ಕೊಪ್ಪಳ: ಕೊಪ್ಪಳ ವೈದ್ಯಕೀಯ ವಿಜ್ಞಾನ ಸಂಸ್ಥೆ (ಕಿಮ್ಸ್) ಆಡಳಿತಾಧಿಕಾರಿ ಬಿ. ಕಲ್ಲೇಶ ಅವರ ಮನೆ ಮೇಲೆ ಶುಕ್ರವಾರ ಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲಿನೆಯ ನಡೆಸುತ್ತಾರೆ.
ಇಲ್ಲಿನ ಭಾಗ್ಯನಗರದ ಯತ್ನಟ್ಟಿ ರಸ್ತೆಯಲ್ಲಿರುವ ಕಲ್ಲೇಶ ಕುಟುಂಬದ ಒಡೆತನದ ಖಾಸಗಿ ಶಾಲೆ ಹಾಗೂ ಕಿಮ್ಸ್ ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆದಿದೆ.
ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ ಕುರಿತು ದೂರು ಬಂದಿದ್ದರಿಂದ ದಾಳಿ ನಡೆಸಲಾಗಿದೆ ಎಂದು ಕೊಪ್ಪಳ ಲೋಕಾಯುಕ್ತ ಪೊಲೀಸರೊಬ್ಬರು ಖಚಿತ ಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.