ಕೊಪ್ಪಳ: ಜಿಲ್ಲೆಯ ನಿವೃತ್ತ ಯೋಧರು, ಹುತಾತ್ಮ ಯೋಧರ ಅವಲಂಬಿತರು, ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಅವರ ಅವಲಂಬಿತರಿಗೆ ನಿಯಮಾನುಸಾರ ಸರ್ಕಾರದ ಸೌಲಭ್ಯ ಕಲ್ಪಿಸದ ಜಿಲ್ಲೆಯ ಅಧಿಕಾರಿಗಳ ವಿರುದ್ಧ ರಾಜ್ಯದ ಉಪ ಲೋಕಾಯುಕ್ತ ನ್ಯಾ.ಬಿ.ವೀರಪ್ಪ ಅವರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.
ಸರ್ಕಾರದಿಂದ ದೊರೆಯಬೇಕಾದ ನಿವೇಶನ ನಿಗದಿತ ಸಮಯದಲ್ಲಿ ನೀಡದೆ ಸರ್ಕಾರಿ, ಸಾರ್ವಜನಿಕ ನೌಕರ, ಅಧಿಕಾರಿಗಳು ಭ್ರಷ್ಟಾಚಾರ ನಡೆಸುತ್ತಿರುವುದು ಹಾಗೂ ಸಂವಿಧಾನಾತ್ಮಕವಾಗಿ ನೀಡಬೇಕಾದ ಪರಿಹಾರವನ್ನು (ಜಮೀನು) ಕಲ್ಪಿಸುವಲ್ಲಿ ನಿರ್ಲಕ್ಷತನ ಮತ್ತು ವಿಳಂಬ ಧೋರಣೆ ತೋರಿದ ಆರೋಪದ ಮೇಲೆ ಅವರು ಈ ಕ್ರಮ ತೆಗೆದುಕೊಂಡಿದ್ದಾರೆ.
ಉಪ ವಿಭಾಗಾಧಿಕಾರಿ ಮಹೇಶ್ ಮಾಲಗಿತ್ತಿ, ಕೊಪ್ಪಳ ತಹಶೀಲ್ದಾರ್ ವಿಠ್ಠಲ್ ಚೌಗಲಾ, ಗಂಗಾವತಿ ತಹಶೀಲ್ದಾರ್ ಯು. ನಾಗರಾಜ, ಕುಷ್ಟಗಿ ತಹಶೀಲ್ದಾರ್ ಅಶೋಕ ಎಸ್. ಶಿಗ್ಗಾವಿ, ಯಲಬುರ್ಗಾ ತಹಶೀಲ್ದಾರ್ ಬಸವರಾಜ, ಕಾರಟಗಿ ತಹಶೀಲ್ದಾರ್ ಕುಮಾರಸ್ವಾಮಿ, ಕನಕಗಿರಿ ತಹಶೀಲ್ದಾರ್ ವಿಶ್ವನಾಥ ಮುರಡಿ, ಕುಕನೂರು ತಹಶೀಲ್ದಾರ್ ಎಚ್. ಪ್ರಾಣೇಶ ಅವರ ವಿರುದ್ಧ ದೂರು ದಾಖಲು ಮಾಡಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.