ADVERTISEMENT

ಚಂದ್ರಗ್ರಹಣ: ಹುಲಿಗೆಮ್ಮ ದೇವಿ ದರ್ಶನ ಸಮಯ ಬದಲು

​ಪ್ರಜಾವಾಣಿ ವಾರ್ತೆ
Published 28 ಫೆಬ್ರುವರಿ 2026, 7:36 IST
Last Updated 28 ಫೆಬ್ರುವರಿ 2026, 7:36 IST
ಹುಲಿಗೆಮ್ಮ ದೇವಿ
ಹುಲಿಗೆಮ್ಮ ದೇವಿ   

ಮುನಿರಾಬಾದ್: ಕಲ್ಯಾಣ ಕರ್ನಾಟಕ ಭಾಗದ ಪ್ರಸಿದ್ಧ ಯಾತ್ರಾ ಸ್ಥಳ, ಶಕ್ತಿಪೀಠ ಹುಲಿಗೆಮ್ಮ ದೇವಿ ದೇವಸ್ಥಾನದಲ್ಲಿ ಚಂದ್ರಗ್ರಹಣದ ಪ್ರಯುಕ್ತ ದೇವಿಯ ದರ್ಶನ ಸಮಯವನ್ನು ಬದಲಾಯಿಸಲಾಗಿದೆ.

ಮಾರ್ಚ್ 3ರಂದು ಚಂದ್ರಗ್ರಹಣ ಸಂಭವಿಸಲಿದ್ದು, ಅಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಮಾತ್ರ ಸಾರ್ವಜನಿಕರಿಗೆ ದೇವಿಯ ದರ್ಶನದ ವ್ಯವಸ್ಥೆ ಇರುತ್ತದೆ.

ನಂತರ ಮಧ್ಯಾಹ್ನ 12 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಗ್ರಹಣ ಕಾಲದ ಕಾರಣ ಭಕ್ತರಿಗೆ ದರ್ಶನದ ವ್ಯವಸ್ಥೆ ಇರುವುದಿಲ್ಲ.

ADVERTISEMENT

ಗ್ರಹಣ ಮಗಿದ ನಂತರ ಸಂಜೆ 7 ಗಂಟೆಯಿಂದ ದೇವಾಲಯದ ಪೂಜಾ ವಿಧಿ–ವಿಧಾನಗಳು ಯಥಾ ಪ್ರಕಾರ ನಡೆಯಲಿವೆ ಎಂದು ಹುಲಿಗೆಮ್ಮ ದೇವಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.